ಹಾವೇರಿ : ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ದಿ ನಿಗಮವು ಪ್ರಸಕ್ತ ಸಾಲಿನಲ್ಲಿ ಅನುಷ್ಠಾನಗೊಳಿಸುತ್ತಿರುವ ವ್ಯಾಪಾರ, ಉದ್ದಿಮೆಗಳಿಗೆ ನೇರ ಅವಧಿ ಸಾಲ ಹಾಗೂ ಗಂಗಾ ಕಲ್ಯಾಣ ಯೋಜನೆ ಸೌಲಭ್ಯ ಪಡೆಯಲು ಮತೀಯ ಅಲ್ಪಸಂಖ್ಯಾತರಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಜಿಲ್ಲೆಯ ಮತೀಯ ಅಲ್ಪಸಂಖ್ಯಾತರಾದ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಸಿಖ್ಖ್, ಬೌದ್ಧ, ಪಾರ್ಸಿ ಹಾಗೂ ಆಂಗ್ಲೋ ಇಂಡಿಯನ್ ಜನಾಂಗದವರು ಅರ್ಜಿಯನ್ನು ಅಗತ್ಯ ದಾಖಲೆಗಳೊಂದಿಗೆ ನವೆಂಬರ 15 ರೊಳಗಾಗಿ ವೆಬ್ಸೈಟ್ http://kmdconline.karanataka.gov.inಮೂಲಕ ಸಲ್ಲಿಸುವಂತೆ ಅಲ್ಪಸಂಖ್ಯಾತರ ಅಭಿವೃದ್ದಿ ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
BREAKING NEWS : ಅ. 3ರವರೆಗೆ ‘ಪಿಎಫ್ಐ’ ನಾಯಕ ಮೊಹಮ್ಮದ್ ಅಶ್ರಫ್ ನನ್ನು ಪೊಲೀಸ್ ಕಸ್ಟಡಿಗೆ ನೀಡಿ ಕೋರ್ಟ್ ಆದೇಶ
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ವ್ಯವಸ್ಥಾಪಕರ ಕಚೇರಿ, ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ, ಮೌಲಾನಾ ಆಜಾದ ಭವನ, ಶಿವಾಜಿ ನಗರ, 3ನೇ ಕ್ರಾಸ್ ಹಾವೇರಿ (ಮೊ.9483008605), ದೂ.08375-234114 ಅಥವಾ ಸಹಾಯವಾಣಿ 8277799990 ಸಂಪರ್ಕಿಸಲು ಕೋರಲಾಗಿದೆ.