ಬೆಂಗಳೂರು : ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ತಮ್ಮ ವಿರುದ್ಧದ ಎಫ್ಐಆರ್ ಪ್ರಶ್ನಿಸಿ ರಾಜ್ಯ ಕಾಂಗ್ರೆಸ್ ಅಧ್ಯಕ್ಷ ಡಿ ಕೆ ಶಿವಕುಮಾರ್ ಸಲ್ಲಿಸಿರುವ ಅರ್ಜಿಗೆ ಆಕ್ಷೇಪಣೆ ಸಲ್ಲಿಸಲು ಕೇಂದ್ರೀಯ ತನಿಖಾ ದಳ (ಸಿಬಿಐ) ಸೋಮವಾರ ಹೈಕೋರ್ಟ್ಗೆ ಹೆಚ್ಚಿನ ಕಾಲಾವಕಾಶ ಕೋರಿದೆ.
ತಮ್ಮ ವಿರುದ್ಧ ಸಿಬಿಐ ದಾಖಲಿಸಿರುವ ಪ್ರಕರಣ ರದ್ದುಪಡಿಸುವಂತೆ ಕೋರಿ ಡಿ.ಕೆ.ಶಿವಕುಮಾರ್ ಕರ್ನಾಟಕ ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದಾರೆ. ಆಕ್ಷೇಪಣೆ ಸಲ್ಲಿಸಲು ಹೆಚ್ಚುವರಿ ಕಾಲಾವಕಾಶ ಬೇಕು ಎಂದು ಸಿಬಿಐ ಮನವಿ ಮಾಡಿದೆ.
2017ರಲ್ಲಿ ಶಿವಕುಮಾರ್ ಮೇಲೆ ನಡೆದ ಆದಾಯ ತೆರಿಗೆ ದಾಳಿಯಿಂದ ಈ ಪ್ರಕರಣ ಆರಂಭವಾಗಿದೆ.
ವಿಚಾರಣೆ ವೇಳೆ ತನಿಖೆ ಪೂರ್ಣಗೊಂಡು ಆರೋಪಪಟ್ಟಿ ದಾಖಲಿಸಲಾಗಿದೆಯೇ ಎಂದು ಸಿಬಿಐ ಪರ ವಕೀಲರನ್ನು ಹೈಕೋರ್ಟ್ ಪ್ರಶ್ನಿಸಿತು. ಇದಕ್ಕೆ ಪ್ರತಿಕ್ರಿಯಿಸಿದ ಸಿಬಿಐ ಪರ ವಕೀಲರು, ಡಿ.ಕೆ.ಶಿವಕುಮಾರ್ ವಿರುದ್ಧ ತನಿಖೆ ನಡೆಯುತ್ತಿದೆ ಎಂದು ಹೇಳಿದೆ. ವಿಚಾರಣೆಯನ್ನು ದಸರಾ ರಜೆಯ ಬಳಿಕ ಮುಂದುವರಿಸಲಾಗುವುದು ಎಂದು ಹೈಕೋರ್ಟ್ ಹೇಳಿತು.
BREAKING NEWS: ಬಾಂಗ್ಲಾ ದೋಣಿ ದುರಂತ: ಮೃತರ ಸಂಖ್ಯೆ 50ಕ್ಕೆ ಏರಿಕೆ | Bangladesh ferry accident