ವಿಜಯಪುರ: ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ವಿರುದ್ಧ ಮತ್ತೊಮ್ಮೆ ಪೋಲಿಸರು ಸಮರ ಸಾರಿದ್ದು, ಪ್ರಾಥಮಿಕ ಮೂಲಗಳ ಪ್ರಕಾರ, ಕರ್ನಾಟಕ ಮತ್ತು ದೆಹಲಿಯ ಶಾಹೀನ್ ಬಾಗ್ ಸೇರಿದಂತೆ 8 ರಾಜ್ಯಗಳಲ್ಲಿ ಪಿಎಫ್ಐನ ನಿವಾಸಗಳ ಮೇಲೆ ದಾಳಿ ನಡೆಸಿದ್ದಾರೆ. ಸುಮಾರು 40ಕ್ಕೂ ಹೆಚ್ಚು ಮುಖಂಡರನ್ನ ವಶಕ್ಕೆ ಪಡೆದಿದ್ದಾರೆ.
ವಿಜಯಪುದಲ್ಲಿ ವಶಕ್ಕೆ ಪಡೆದ ಪಿಎಫ್ಐ ಜಿಲ್ಲಾಧ್ಯಕ್ಷ ಅಸ್ಪಾಕ ಜಮಖಂಡಿಯನ್ನು ಜುಡಿಷಿಯಲ್ ಮ್ಯಾಜಿಸ್ಟ್ರೇಟ್ ನ್ಯಾಯಾಲಯಕ್ಕೆ ಹಾಜರು ಪಡಿಸಲಾಗಿದೆ. 10ದಿನ ನ್ಯಾಯಾಂಗ ಬಂಧನಕ್ಕೆ ನ್ಯಾಯಾಧೀಶರು ಒಳಪಡಿಸಿ ಆದೇಶಿಸಿದ್ದಾರೆ ಎಂದು ಜಿಲ್ಲಾ ಎಸ್ಪಿ ಆನಂದಕುಮಾರ ತಿಳಿಸಿದ್ದಾರೆ.
ಯಾವುದಾದರೂ ಕೃತ್ಯ ಎಸಗಬಹುದೆಂದು ಮುನ್ನೆಚ್ಚರಿಕೆಯಾಗಿ ಅಸ್ಪಾಕ ಜಮಖಂಡಿಯನ್ನು ಇಂದು ಬೆಳಗ್ಗೆ ಅವರ ಮನೆ ಮೇಲೆ ದಾಳಿ ನಡೆಸಿ ವಶಕ್ಕೆ ಪಡೆದು ವಿಚಾರಣೆ ಕೈಗೊಳ್ಳಲಾಗಿದೆ. ಈಗ ನ್ಯಾಯಾಲಯ ಅವರಿಗೆ 10 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ. ಬಂಧಿತ ಮುಖಂಡನ ಬಳಿ ಯಾವುದೇ ವಸ್ತುಗಳನ್ನು ವಶಪಡಿಸಿಕೊಂಡಿಲ್ಲ ಎಂದು ಎಸ್ಪಿ ಸ್ಪಷ್ಟಪಡಿಸಿದ್ದಾರೆ.