ಹಾವೇರಿ: ಕಾಂಗ್ರೆಸ್ ಪೇ ಸಿಎಂ ಕ್ಯಾಂಪೇನ್ ಗೆ ಸಚಿವ ಬಿ.ಸಿ ಪಾಟೀಲ್ ಕಿಡಿಕಾರಿದ್ದಾರೆ. ಕಾಂಗ್ರೆಸ್ ಎಷ್ಟು ಸತ್ಯಹರಿಶ್ಚಂದ್ರರೆಂದು ನೋಡಿಕೊಳ್ಳಲಿ ಎಂದು ವಾಗ್ದಾಳಿ ನಡೆಸಿದ್ದಾರೆ.
BIGG NEWS : `PFI’ ಸಂಘಟನೆ ನಿಷೇಧದ ಬಗ್ಗೆ ಸರ್ಕಾರ ತೀರ್ಮಾನಿಸಲಿದೆ : ಕೃಷಿ ಸಚಿವ ಬಿ.ಸಿ.ಪಾಟೀಲ್
ನಗರದಲ್ಲಿ ಮಾತನಾಡಿದ ಅವರು, ಸಿಎಂ ಬಸವರಾಜ ಬೊಮ್ಮಾಯಿ ಮುಖ್ಯಮಂತ್ರಿ ಆದಾಗಿನಿಂದ ಅಪಪ್ರಚಾರ ಮಾಡುತ್ತಿದ್ದಾರೆ. ಸಿಎಂ ಯಶಸ್ವಿ, ಪ್ರಾಮಾಣಿಕವಾಗಿ ಕೆಲಸ ಮಾಡುತ್ತಿದ್ದಾರೆ. 15 ಗಂಟೆಗಳ ಕಾಲ ಕೆಲಸ ಮಾಡಿ ಜಾನಾನುರಾಗಿ ಸಿಎಂ ಆಗಿದ್ದಾರೆ. ಹೀಗಾಗಿ ಕಾಂಗ್ರೆಸ್ ನವರಿಗೆ ಭಯ ಹುಟ್ಟಿದೆ ಎಂದು ಕಾಂಗ್ರೆಸ್ ವಿರುದ್ಧ ಕಿಡಿಕಾರಿದ್ದಾರೆ.
BIGG NEWS : `PFI’ ಸಂಘಟನೆ ನಿಷೇಧದ ಬಗ್ಗೆ ಸರ್ಕಾರ ತೀರ್ಮಾನಿಸಲಿದೆ : ಕೃಷಿ ಸಚಿವ ಬಿ.ಸಿ.ಪಾಟೀಲ್
ಇನ್ನು ರಾಜ್ಯಾದ್ಯಂತ ಪಿಎಫ್ ಐ (PFI) ಸಂಘಟನೆಯ ಮುಖಂಡರ ಮನೆ ಮೇಲೆ ಪೊಲೀಸರು ದಾಳಿ ನಡೆಸಿದ್ದು, ಸುಮಾರು 70 ಕ್ಕೂ ಹೆಚ್ಚು ಕಾರ್ಯಕರ್ತರನ್ನು ವಶಕ್ಕೆ ಪಡೆಯಲಾಗಿದೆ.
ಪಿಎಫ್ ಐ ಸಂಘಟನೆ ನಿಷೇಧದ ಬಗ್ಗೆ ಸರ್ಕಾರ ತೀರ್ಮಾನಿಸುತ್ತದೆ. ಇದರಲ್ಲಿ ಲಾಭನಷ್ಟದ ಪ್ರಶ್ನೆಯಿಲ್ಲ. ದೇಶ ಉಳಿಸೋದು, ಶಾಂತಿ ಕಾಪಾಡೋದು ಮುಖ್ಯ, ಲಾಭ-ನಷ್ಟದ ಬಗ್ಗೆ ಚಿಂತನೆ ಮಾಡುವ ಅವಶ್ಯಕತೆ ಇಲ್ಲ ಎಂದರು.