ವಿಜಯಪುರ : ರಾಜ್ಯದಲ್ಲಿ ಮಕ್ಕಳ ಕಳ್ಳರ ವದಂತಿ ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದ್ದು, ವಿಜಯಪುರದಲ್ಲಿ ಮಕ್ಕಳ ಕಳ್ಳರು ಎಂದ ಶಂಕಿಸಿ ಅಪರಿಚಿತರನ್ನು ಹಲ್ಲೆ ಮಾಡಿರುವ ಘಟನೆ ವಿಜಯಪುರ ಜಿಲ್ಲೆಯಲ್ಲಿ ನಡೆದಿದೆ.
ವಿಜಯಪುರ ಜಿಲ್ಲೆಯ ತಿಕೋಟಾ ತಾಲೂಕಿನ ಇಟ್ಟಂಗಿಹಾಳ ಗ್ರಾಮದಲ್ಲಿ, ಮಕ್ಕಳ ಕಳ್ಳನೆಂಬ ಶಂಕೆಯಿಂದ ಓರ್ವ ಯುವಕನನ್ನು ಹಿಡಿದು ಕಂಬಕ್ಕೆ ಕಟ್ಟಿಹಾಕಿ, ಥಳಿಸಿರುವ ಘಟನೆ ಗ್ರಾಮದಲ್ಲಿ ಜರುಗಿದೆ.
ಇಟ್ಟಂಗಿಹಾಳ ಗ್ರಾಮದ ಪೂಜಾರ ವಸ್ತಿ ಬಳಿ ಅಪರಿಚಿತ ಯುವಕ ಓಡಾಡುವುದನ್ನು ಗಮನಿಸಿದ ಸ್ಥಳೀಯರು, ಮಕ್ಕಳ ಕಳ್ಳನೆಂಬ ಶಂಕೆಯಿಂದ ಯುವಕನನ್ನು ಹಿಡಿದು ಗ್ರಾಮದ ವಿದ್ಯುತ್ ಕಂಬಕ್ಕೆ ಕಟ್ಟಿ ಥಳಿಸಿದ್ದಾರೆ. ವಿಷಯ ತಿಳಿದು ಸ್ಥಳಕ್ಕೆ ಧಾವಿಸಿರುವ ವಿಜಯಪುರ ಗ್ರಾಮೀಣ ಠಾಣೆ ಪೊಲೀಸರು, ಪರಿಶೀಲನೆ ನಡೆಸಿದ್ದಾರೆ.
BIG NEWS: ಇಂದು ಭೂಮಿಯತ್ತ ಧಾವಿಸುತ್ತಿದೆ ಅಪಾಯಕಾರಿ ಕ್ಷುದ್ರಗ್ರಹ: ನಾಸಾ ಎಚ್ಚರಿಕೆ | NASA warning