ಕಲಬುರಗಿ: ರಾಜ್ಯಾದ್ಯಂತ ಪಿಎಫ್ ಐ ಮುಖಂಡರ ಮನೆಗಳ ಪೊಲೀಸರು ದಾಳಿ ಮಾಡಿ 40 ಕ್ಕೂ ಹೆಚ್ಚು ಮುಖಂಡರನ್ನು ವಶಕ್ಕೆ ಪಡೆಯಲಾಗಿದೆ. ಇದಕ್ಕೆ ಎಸ್ಡಿಪಿಐ ರಾಜ್ಯ ಪ್ರಧಾನ ಕಾರ್ಯದರ್ಶಿ ಭಾಸ್ಕರ್ ಪ್ರಸಾದ್ ಖಂಡಿಸಿದ್ದಾರೆ.
ನಗರದಲ್ಲಿ ಮಾತನಾಡಿದ ಅವರು, ಪೊಲೀಸರು ಕೇಂದ್ರ ಸರ್ಕಾರದ ಅಣತಿಯಂತೆ ಪೊಲೀಸರು ದಾಳಿ ಮಾಡಿದ್ದಾರೆ.ಪ್ರತಿಭಟನೆ ಮಾಡಬಹುದು ಎನ್ನುವ ಕಾರಣಕ್ಕೆ ಹಲವರನ್ನು ವಶಕ್ಕೆ ಪಡೆದಿದ್ದಾರೆ. ಎಷ್ಟೇ ಜನರ ಮನೆ ಮೇಲೆ ದಾಳಿ ನಡೆಸಿದರೂ ನಮ್ಮ ಹೋರಾಟ ನಿಲ್ಲುವುದಿಲ್ಲ. ಪಿಎಫ್ಐ ಮೇಲಿನ ದಾಳಿಗೆ ಕಾಂಗ್ರೆಸ್ ಸಹ ಬೆಂಬಲಿಸಿದೆ. ಸಂಘಟನೆಯ ಬಗ್ಗೆ ಇವರಿಗೆ ಅಷ್ಟೇಕೆ ಭೀತಿ ಎಂದು ಪ್ರಶ್ನಿಸಿದರು.
ಆರ್ಎಸ್ಎಸ್ ಮತ್ತು ಸಂಬಂಧಿತ ಸಂಘಟನೆಗಳು ದೇಶದ ಭಾವೈಕ್ಯತೆಗೆ ಅಪಾಯ ತಂದೊಡ್ಡುವ ಚಟುವಟಿಕೆ ನಡೆಸುತ್ತಿವೆ. ಆದರೆ ಎಂದಿಗೂ ಈ ಸಂಘಟನೆಗಳ ಮೇಲೆ ದಾಳಿ ನಡೆದಿಲ್ಲ. ಆರ್ಎಸ್ಎಸ್ ಮತ್ತು ಅದರ ಪರಿವಾರದ ಸಂಘಟನೆಗಳಾದ ಬಜರಂಗದಳ, ವಿಶ್ವ ಹಿಂದೂ ಪರಿಷತ್, ಶ್ರೀರಾಮಸೇನೆಗಳ ನಾಯಕರ ಬಳಿ ಆಯುಧಗಳಿವೆ. ಆದರೂ ಅವರ ಮೇಲೆ ಎಂದಿಗೂ ಎನ್ಐಎ ದಾಳಿ ಮಾಡಿಲ್ಲ ಏಕೆ ಎಂದು ಅವರು ಪ್ರಶ್ನಿಸಿದರು.