ಚಿತ್ರದುರ್ಗ : ಪೋಕ್ಸೋ ಪ್ರಕರಣ ಸಂಬಂಧ ಜೈಲುಪಾಲಾಗಿರುವ ಮುರುಘಾ ಶ್ರೀಗಳ ನ್ಯಾಯಾಂಗ ಬಂಧನ ಅಕ್ಟೋಬರ್ 10 ರವರೆಗೆ ವಿಸ್ತರಿಸಿ ಕೋರ್ಟ್ ಆದೇಶ ಹೊರಡಿಸಿದೆ.
ಇಂದು ಮುರುಘಾ ಶ್ರೀಗಳ ನ್ಯಾಯಾಂಗ ಬಂಧನಅಂತ್ಯವಾದ ಹಿನ್ನೆಲೆ ಅವರನ್ನು ಪೊಲೀಸರು ಕೋರ್ಟ್ ಗೆ ಹಾಜರುಪಡಿಸಿದ್ದರು. ಇದೀಗ ವಿಚಾರಣೆ ನಡೆಸಿದ ಚಿತ್ರದುರ್ಗ 2 ನೇ ಹೆಚ್ಚುವರಿ ಸೆಷನ್ಸ್ ನ್ಯಾಯಾಲಯವು ಈ ಆದೇಶ ಹೊರಡಿಸಿದೆ.
ಈ ಪ್ರಕರಣದ ವಿಚಾರಣೆ ನಡೆಸಿದಂತ ನ್ಯಾಯಪೀಠವು ಬಾಲಕಿಯರಿಗೆ ಲೈಂಗಿಕ ಕಿರುಕುಳ ನೀಡಿದಂತ ಆರೋಪದಲ್ಲಿ ಎ.1 ಆರೋಪಿಯಾಗಿರುವಂತ ಮುರುಘಾ ಶ್ರೀಗಳು ಹಾಗೂ ಎ2 ಆರೋಪಿಯಾದಂತ ಲೇಡಿ ವಾರ್ಡನ್ ಗಳಿಗೆ ಅಕ್ಟೋಬರ್ 10ರವರೆಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ ವಿಸ್ತರಿಸಿ ಆದೇಶಿಸಿದೆ. ಈ ಮೂಲಕ ಮತ್ತೆ ಮುರುಘಾ ಶ್ರೀಗಳಿಗೆ ಬಿಗ್ ಶಾಕ್ ನೀಡಲಾಗಿದೆ.
ಇನ್ನೂ, ಮಠದ ಶಾಲಾ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿರುವ ಆರೋಪದ ಮೇರೆಗೆ ಜೈಲು ಪಾಲಾಗಿರುವ ಮುರುಘಾ ಶ್ರೀ ಜೈಲಿನಿಂದಲೇ ಚೆಕ್, ಮತ್ತಿತರ ದಾಖಲೆಗಳಿ ಸಹಿ ಹಾಕಲು ಅನುಮತಿ ಕೇಳಿದ್ದಾರೆ. ಮಠದ ಶಿಕ್ಷಣ ಸಂಸ್ಥೆಯ ಶಿಕ್ಷಕರಿಗೆ ವೇತನ ನೀಡಿವ ಸಲುವಾಗಿ ಚೆಕ್ಗಳಿಗೆ ಸಹಿ ಹಾಕಲು ಅನುಮತಿ ನೀಡುವಂತೆ ಕೋರ್ಟ್ಗೆ ಮನವಿ ಮಾಡಿದ್ದರು.ಬಳಿಕ ಚೆಕ್, ದಾಖಲೆಗಳಿಗೆ ಸಹಿ ಹಾಕಲು ಅನುಮತಿ ಕೋರಿ ಹೈಕೋರ್ಟ್ ಮೆಟ್ಟಿಲೇರಿದ್ದರು.
ಜೈಲಿನಿಂದಲೇ ಚೆಕ್, ದಾಖಲೆಗೆ ಸಹಿ ಹಾಕಲು ಅನುಮತಿ ಕೋರಿ ಮುರುಘಾ ಶರಣ ಪರ ವಕೀಲರು ಚಿತ್ರದುರ್ಗದ ಸೆಷನ್ ಕೋರ್ಟ್ಗೆ ಮನವಿ ಮಾಡಿದ್ದರು. ಆದ್ರೆ, ಕೋರ್ಟ್, ಅನುಮತಿ ನಿರಾಕರಿಸಿ ಸೆ.20ರಂದು ಆದೇಶ ಹೊರಡಿಸಿತ್ತು. ಈ ಹಿನ್ನೆಲೆಯಲ್ಲಿ ಮುರುಘಾ ಶರಣರು ಹೈಕೋರ್ಟ್ ಮೊರೆ ಹೋಗಿದ್ದರು.