ಕುಲ್ಗಾಮ್ (ಜಮ್ಮು ಮತ್ತು ಕಾಶ್ಮೀರ): ಜಮ್ಮು ಮತ್ತು ಕಾಶ್ಮೀರದ ಕುಲ್ಗಾಮ್ನಲ್ಲಿ ಭದ್ರತಾ ಪಡೆಗಳು ಕಳೆದ 24 ಗಂಟೆಗಳಲ್ಲಿ ನಡೆಸಿದ ಜಂಟಿ ಕಾರ್ಯಾಚರಣೆಯಲ್ಲಿ ಪಾಕಿಸ್ತಾನಿ ಸೇರಿದಂತೆ ಮೂವರು ಜೈಶ್-ಎ-ಮೊಹಮ್ಮದ್ (ಜೆಎಂ) ಭಯೋತ್ಪಾದಕರನ್ನು ಹತ್ಯೆ ಮಾಡಿದೆ.
ಕುಲ್ಗಾಮ್ನ ಅಹ್ವಾಟೂ ಪ್ರದೇಶದಲ್ಲಿ ಭಯೋತ್ಪಾದಕರ ಉಪಸ್ಥಿತಿಯ ಬಗ್ಗೆ ಜಮ್ಮು ಮತ್ತು ಕಾಶ್ಮೀರದ ಪೊಲೀಸರಿಗೆ ಗುಪ್ತಚರ ಮಾಹಿತಿ ಸಿಕ್ಕಿತು. ಈ ಪ್ರದೇಶದಲ್ಲಿ ಪೊಲೀಸರು, ಸೇನೆ ಮತ್ತು ಕೇಂದ್ರೀಯ ಮೀಸಲು ಪೊಲೀಸ್ ಪಡೆ (CRPF) ಜಂಟಿಯಾಗಿ ಕಾರ್ಡನ್ ಮತ್ತು ಸರ್ಚ್ ಕಾರ್ಯಾಚರಣೆಯನ್ನು ಪ್ರಾರಂಭಿಸಿತು. ಈ ವೇಳೆ ನಡೆದ ಎನ್ಕೌಂಟರ್ನಲ್ಲಿ ಇಬ್ಬರು ಸ್ಥಳೀಯ ಭಯೋತ್ಪಾದಕರು ಹತರಾಗಿದ್ದಾರೆ. ಅವರನ್ನು ಬಟ್ಪೋರಾದ ಮೊಹಮ್ಮದ್ ಶಾಫಿ ಗನಿ ಮತ್ತು ಟಕಿಯಾ ಗೋಪಾಲ್ಪೋರಾದ ಮೊಹಮ್ಮದ್ ಆಸಿಫ್ ವಾನಿ ಅಲಿಯಾಸ್ ಯವರ್ ಎಂದು ಗುರುತಿಸಲಾಗಿದೆ. ಇವರು ನಿಷೇಧಿತ ಭಯೋತ್ಪಾದಕ ಸಂಘಟನೆ ಜೈಶ್-ಎ-ಮೊಹಮ್ಮದ್ (ಜೆಇಎಂ) ನೊಂದಿಗೆ ಸಂಪರ್ಕ ಹೊಂದಿದವರಾಗಿದ್ದಾರೆ.
ಮತೊಂದು ಎನ್ಕೌಂಟರ್ನಲ್ಲಿ ನಿಷೇಧಿತ ಭಯೋತ್ಪಾದಕ ಸಂಘಟನೆ ಜೆಎಂ ಜೊತೆ ಸಂಬಂಧ ಹೊಂದಿರುವ ಅಬು ಹುರಾಹ್ ಎಂದು ಗುರುತಿಸಲಾದ ಪಾಕಿಸ್ತಾನಿ ಭಯೋತ್ಪಾದಕನನ್ನು ಕೊಲ್ಲಲಾಯಿತು.
BIGG NEWS : 15 ಸಾವಿರ ಶಿಕ್ಷಕರ ನೇಮಕಾತಿ : 1:2 ಅನುಪಾತದಲ್ಲಿ ಅಭ್ಯರ್ಥಿಗಳ ತಾತ್ಕಾಲಿಕ ಪರಿಶೀಲನಾ ಪಟ್ಟಿ ಪ್ರಕಟ
BIGG NEWS : ಪೋಕ್ಸೋ ಪ್ರಕರಣ : ಮುರುಘಾಶ್ರೀಗಳಿಗೆ ಮತ್ತೆ ಅ.10ರವರೆಗೆ ನ್ಯಾಯಾಂಗ ಬಂಧನ