ಬೆಂಗಳೂರು : ದೇಶದಲ್ಲಿ ಪ್ಯಾಪುಲರ್ ಫ್ರಂಟ್ ಆಫ್ ಇಂಡಿಯಾ (PFI) 5 ವರ್ಷಗಳ ಕಾಲ ನಿಷೇಧ ಮಾಡಿ ಕೇಂದ್ರ ಸರ್ಕಾರ ಆದೇಶ ಹೊರಡಿಸಿದ್ದು, ಈ ಬಗ್ಗೆ ಗೃಹ ಸಚಿವ ಅರಗಜ್ಞಾನೇಂದ್ರ ಪ್ರತಿಕ್ರಿಯೆ ನೀಡಿದ್ದಾರೆ.
PFI ಸಂಘಟನೆಗೆ ಮತ್ತೊಂದು ಬಿಗ್ ಶಾಕ್ : ಹಣಕಾಸು ವಹಿವಾಟು ನಿರ್ಬಂಧ ಹೇರಿದ ಕೇಂದ್ರ ಸರ್ಕಾರ
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೇಂದ್ರ ಸರ್ಕಾರ ಪಿಎಫ್ ಐ ಬ್ಯಾನ್ ಮಾಡಿರುವುದು ನಾನು ಸ್ವಾಗತಿಸುತ್ತೇನೆ. ದುಷ್ಕೃತ್ಯಕ್ಕೆ ಕುಮ್ಮಕ್ಕು ನೀಡುತ್ತಿದ್ದ ಪಿಎಫ್ ಐ ವಿರುದ್ಧ ಈ ಕ್ರಮ ಕೈಗೊಳ್ಳಲಾಗಿದೆ. ಕೇಂದ್ರ ಸರ್ಕಾರ ಬಲವಾದ ಸಾಕ್ಷ್ಯ ಸಂಗ್ರಹಿಸಿ ಈ ತೀರ್ಮಾನ ತೆಗೆದುಕೊಂಡಿದೆ. ದೇಶದ ಏಕತೆ, ಸಮಗ್ರತೆ ಕಾಪಾಡುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಒಳ್ಳೆಯ ನಿರ್ಧಾರ ಮಾಡಿದೆ ಎಂದರು.
ಕೇಂದ್ರ ಸರ್ಕಾರವು ಪಿಎಫ್ಐ (ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ) ಮತ್ತು ಅದರ ಸಹವರ್ತಿಗಳು ಅಥವಾ ಅಂಗಸಂಸ್ಥೆಗಳನ್ನು ತಕ್ಷಣದಿಂದ ಜಾರಿಗೆ ಬರುವಂತೆ ಐದು ವರ್ಷಗಳ ಅವಧಿಗೆ ಕಾನೂನುಬಾಹಿರ ಸಂಘಟನೆ ಎಂದು ಘೋಷಿಸಲಾಗಿದೆ.
ಕೆಲ ದಿನಗಳ ಹಿಂದೆ ದೇಶಧ 15 ರಾಜ್ಯಗಳಲ್ಲಿ ಪಿಎಫ್ ಐ ಮೇಲೆ ರಾಷ್ಟ್ರೀಯ ತನಿಖಾ ಸಂಸ್ಥೆ ದಾಳಿ ನಡೆಸಿ ನೂರಾರು ಕಾರ್ಯಕರ್ತರನ್ನು ಬಂಧಿಸಿದ್ದು, ಈ ಸಂಘಟನೆ ಉಗ್ರವಾದಕ್ಕೆ ಬೆಂಬಲ ನೀಡುತ್ತಿರುವ ಬಗ್ಗೆ ಸಂಗ್ರಹಿಸಿರುವ ಸಾಕ್ಷ್ಯಗಳ ಆಧಾರದಲ್ಲಿ ಪಿಎಫ್ ಐ ಅನ್ನು ದೇಶದಲ್ಲಿ 5 ವರ್ಷಗಳ ಕಾಲ ನಿಷೇಧಿಸಿ ಕೇಂದ್ರ ಗೃಹ ಸಚಿವಾಲಯ ಆದೇಶ ಹೊರಡಿಸಿದೆ.