ಮುಂಬೈ: ಮಹಾರಾಷ್ಟ್ರದ ನೈಗಾಂವ್ ನಲ್ಲಿರುವ ಕಾಸ್ ಪವರ್ ಎಂಜಿನಿಯರಿಂಗ್ ಲಿಮಿಟೆಡ್ ಕಂಪನಿಯಲ್ಲಿ ಬುಧವಾರ ಸಂಭವಿಸಿದ ಬಾಯ್ಲರ್ ಸ್ಫೋಟದಲ್ಲಿ ಮೂವರು ಕಾರ್ಮಿಕರು ಮೃತಪಟ್ಟಿದ್ದು, ಇತರ ಎಂಟು ಮಂದಿ ಗಾಯಗೊಂಡಿದ್ದಾರೆ.
ಹೈಡ್ರೋಜನ್ ಸಿಲಿಂಡರ್ ಸ್ಫೋಟದಿಂದಾಗಿ ಈ ಘಟನೆ ನಡೆದಿದ್ದು, ಮುಂಬೈ-ಅಹಮದಾಬಾದ್ ರಾಷ್ಟ್ರೀಯ ಹೆದ್ದಾರಿ ವಸಾಯಿಯಲ್ಲಿ ಭಾರೀ ಪ್ರಮಾಣದ ಬೆಂಕಿಯ ಹೊಗೆ ಕಾಣಿಸಿಕೊಂಡಿದೆ.
ನೈಗಾಂವ್ ನ (ಪೂರ್ವ) ವಾಕಿಪಾಡಾದ ಚಂದ್ರಪಾದದಲ್ಲಿರುವ ಕಾರ್ಖಾನೆಯಲ್ಲಿ 40 ಕ್ಕೂ ಹೆಚ್ಚು ಕಾರ್ಮಿಕರು ಇದ್ದರು. ಸದ್ಯ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ ಎಂಬ ಮಾಹಿತಿ ಲಭ್ಯವಾಗಿದೆ.