ನವದೆಹಲಿ: ಹಿರಿಯ ವಕೀಲ ಆರ್.ವೆಂಕಟರಮಣಿ ಅವರು ಭಾರತದ ಹೊಸ ಅಟಾರ್ನಿ ಜನರಲ್ ಆಗಿ ಮೂರು ವರ್ಷಗಳ ಅವಧಿಗೆ ನೇಮಕಗೊಂಡಿದ್ದಾರೆ. ಹಿರಿಯ ಅಡ್ವೊಕೇಟ್ ಜನರಲ್ ಮುಕುಲ್ ರೋಹಟ್ಗಿ ಅವರು ಭಾರತದ ಮುಂದಿನ ಅಟಾರ್ನಿ ಜನರಲ್ (ಎ-ಜಿ) ಆಗಲು ನಿರಾಕರಿಸಿದ ಬಳಿಕ ಕೇಂದ್ರ ಸರ್ಕಾರ ಭಾರತದ ಹೊಸ ಅಟಾರ್ನಿ ಜನರಲ್ ಆಗಿ ಹಿರಿಯ ವಕೀಲ ಆರ್.ವೆಂಕಟರಮಣಿ ಅವರನ್ನು ನೇಮಕ ಮಾಡಿ ಆದೇಶ ಮಾಡಿದೆ.
ಕೇಂದ್ರ ಸರ್ಕಾರವು ಹಿರಿಯ ವಕೀಲ ಆರ್.ವೆಂಕಟರಮಣಿ ಅವರನ್ನು ಭಾರತದ ಹೊಸ ಅಟಾರ್ನಿ ಜನರಲ್ ಆಗಿ ನೇಮಿಸಿದೆ. ಹಾಲಿ ಅಟಾರ್ನಿ ಜನರಲ್ ಕೆ.ಕೆ.ವೇಣುಗೋಪಾಲ್ ಅವರ ಅಧಿಕಾರಾವಧಿ ಸೆಪ್ಟೆಂಬರ್ 30 ಕ್ಕೆ ಕೊನೆಗೊಳ್ಳಲಿದೆ.