ಒಡಿಶಾ: ಮೀನು ಸಂಸ್ಕರಣಾ ಘಟಕದಲ್ಲಿ ಅನಿಲ ಸೋರಿಕೆಯಾದ ಪರಿಣಾಮ 30ಕ್ಕೂ ಹೆಚ್ಚು ಕಾರ್ಮಿಕರು ಅಸ್ವಸ್ಥಗೊಂಡಿರುವ ಘಟನೆ ಒಡಿಶಾದ ಬಾಲಸೋರ್ ಜಿಲ್ಲೆಯಲ್ಲಿ ನಡೆದಿದೆ.
ವರದಿಗಳ ಪ್ರಕಾರ, ಇಂದು ಸಂಜೆ ಬಾಲಸೋರ್ ಜಿಲ್ಲೆಯ ಖಾಂತಪದ ಬಳಿಯ ಸಿಗಡಿ ಸಂಸ್ಕರಣಾ ಘಟಕದಲ್ಲಿ ಈ ಘಟನೆ ಸಂಭವಿಸಿದೆ.
ಅಸ್ವಸ್ಥಗೊಂಡ ಕೆಲವು ಕಾರ್ಮಿಕರನ್ನು ಖಾಂತಪದದಲ್ಲಿರುವ ಸಮುದಾಯ ಆರೋಗ್ಯ ಕೇಂದ್ರಕ್ಕೆ ದಾಖಲಿಸಿದರೆ, ಇನ್ನು ಕೆಲವರನ್ನು ಬಾಲಸೋರ್ನ ಜಿಲ್ಲಾ ಕೇಂದ್ರ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ ಎಂದು ವರದಿಯಾಗಿದೆ. ಕೆಲವರ ಸ್ಥಿತಿ ಹದಗೆಟ್ಟಿದೆ ಎಂದು ವರದಿಯಾಗಿದೆ.
ವಿಷಯ ತಿಳಿಯುತ್ತಿದ್ದಂತೆ ಸ್ಥಳೀಯ ಪೊಲೀಸರು ಸ್ಥಳಕ್ಕೆ ಧಾವಿಸಿದ್ದು, ಘಟನೆ ಕುರಿತು ತನಿಖೆ ಆರಂಭಿಸಿದ್ದಾರೆ.