ಬೆಂಗಳೂರು : ಲಲಿತಾ ಪಂಚಮಿಯಂದು ದೇವಸ್ಥಾನಗಳಲ್ಲಿ ಸಾಮೂಹಿಕ ಕುಂಕುಮಾರ್ಚನೆ ನಡೆಸುವಂತೆ ಮುಜರಾಯಿ ಸಚಿವೆ ಶಶಿಕಲಾ ಜೊಲ್ಲೆ ( Shashikala Jolle ) ಸೂಚನೆ ನೀಡಿದ್ದಾರೆ.
ದಿನಾಂಕ 30:09:2022 ರ ಶುಕ್ರವಾರವು ಲಲಿತಾ ಪಂಚಮಿ ವಿಶೇಷವಾಗಿದ್ದು, ಈ ದಿನದಂದು ಧಾರ್ಮಿಕ ದತ್ತಿ ಇಲಾಖೆ ವ್ಯಾಪ್ತಿಯಲ್ಲಿ ಬರುವ ದೇವಾಲಯಗಳಲ್ಲಿ ಸಾಮೂಹಿಕವಾಗಿ ಹಿಂದೂ ಮಹಿಳೆಯರನ್ನು ಬರ ಮಾಡಿಕೊಂಡು ಲೋಕ ಕಲ್ಯಾಣಕ್ಕಾಗಿ ಕುಂಕುಮಾರ್ಚನೆಯನ್ನು ಅರ್ಚಕರ ಮೂಲಕ ಎರಡು ಪಾಳಿಯಲ್ಲಿ ನೆರವೇರಿಸುವಂತೆ ಸಚಿವರು ಸೂಚನೆ ನೀಡಿದ್ದಾರೆ.
ಸೆ.30 ರಂದು ಸಾಮೂಹಿಕ ಕುಂಕುಮಾರ್ಚನೆ ನಡೆಸಲು ಸಾಧ್ಯವಾಗದೇ ಇದ್ದಲ್ಲಿ ದಿನಾಂಕ 03:10:2022 ರ ಸೋಮವಾರ ದುರ್ಗಾಷ್ಟಮಿಯಂದು ಈ ಕಾರ್ಯಕ್ರಮ ನಡೆಸಬೇಕು ಹಾಗೂ ಇದರ ಬಗ್ಗೆ ವ್ಯಾಪಕ ಪ್ರಚಾರ ನಡೆಸಬೇಕೆಂದು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.ಲೋಕ ಕಲ್ಯಾಣಕ್ಕಾಗಿ ಲಲಿತಾ ಪಂಚಮಿಯಂದು ದೇವಸ್ಥಾನಗಳಲ್ಲಿ ಸಾಮೂಹಿಕ ಕುಂಕುಮಾರ್ಚನೆ ನಡೆಸುವಂತೆ ಮುಜರಾಯಿ ಸಚಿವೆ ಶಶಿಕಲಾ ಜೊಲ್ಲೆ ಸೂಚನೆ ನೀಡಿದ್ದಾರೆ.
ಪ್ರತಿ ವರ್ಷದ ಆಶ್ವಯುಜ ಮಾಸದ ಮೊದಲ ದಿನ ಅಂದರೆ ಪಾಡ್ಯದಿಂದ ನವಮಿಯವರೆಗೆ (ನವರಾತ್ರಿ) ಶಕ್ತಿ ಸ್ವರೂಪಿಣಿಯವರಾದ ಜಗನ್ಮಾತೆಯರನ್ನು ಹಿಂದಿನಿಂದಲೂ ವಿಶೇಷವಾಗಿ ಆರಾಧಿಸುವುದು ಹಿಂದೂ ಧರ್ಮದಲ್ಲಿ ನಡೆಸಿಕೊಂಡು ಬರುತ್ತಿರುವ ಆಚರಣೆಯಾಗಿದೆ. ಅದರಂತೆ ದಿನಾಂಕ 30.09.2022 ರ ಶುಕ್ರವಾರವು ಲಲಿತಾ ಪಂಚಮಿ ವಿಶೇಷವಾಗಿದ್ದು, ಈ ದಿನದಂದು ಧಾರ್ಮಿಕ ದತ್ತಿ ಇಲಾಖೆಯ ವ್ಯಾಪ್ತಿಯಲ್ಲಿ ಬರುವ ದೇವಸ್ಥಾನಗಳಲ್ಲಿ ಸಾಮೂಹಿಕವಾಗಿ ಹಿಂದೂ ಮಹಿಳೆಯರನ್ನು ಬರಮಾಡಿಕೊಂಡು ಲೋಕ ಕಲ್ಯಾಣಕ್ಕಾಗಿ ಸಾಮೂಹಿಕ ಕುಂಕುಮಾರ್ಚನೆಯನ್ನು ಲೋಕ ಕಲ್ಯಾಣಕ್ಕಾಗಿ ಕುಂಕುಮಾರ್ಚನೆಯನ್ನು ಅರ್ಚಕರ ಮೂಲಕ ಎರಡು ಪಾಳಿಯಲ್ಲಿ ನೆರವೇರಿಸುವಂತೆ ಸೂಚನೆ ನೀಡಿದ್ದೇನೆ ಎಂದು ಸಚಿವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
BIGG NEWS : ಸಾರಿಗೆ ನೌಕರ’ರಿಗೆ ದಸರಾ ಗಿಫ್ಟ್: ‘ಗಳಿಕೆ ರಜೆ ನಗದೀಕರಣ’ಕ್ಕೆ ಅವಕಾಶ | KSRTC Employees