ಬೆಂಗಳೂರು : ಯೋಜನಾ ಪ್ರಾಧಿಕಾರದ ವ್ಯಾಪ್ತಿಯ ಪ್ರದೇಶಗಳಲ್ಲಿ ಸರಳವಾಗಿ ಕೃಷಿ ಭೂಮಿ ಕೃಷಿಯೇತರ ಚಟವಟಿಕೆಗಳಿಗೆ ಬಳಸಿಕೊಳ್ಳಲು ಭೂ ಪರಿವರ್ತನೆ ಮಾಡಿಕೊಳ್ಳಲು ಸರ್ಕಾರ ಮುಂದಾಗಿದೆ.
ಸುದ್ದಿಗಾರರ ಜೊತೆ ಮಾತನಾಡಿದ ಕಂದಾಯ ಸಚಿವ ಆರ್ ಅಶೋಕ್ ಸಾರ್ವಜನಿಕರ ಅನುಕೂಲಕ್ಕಾಗಿ ಸುಗ್ರೀವಾಜ್ಞೆ ಮೂಲಕ ರಾಜ್ಯದಲ್ಲಿ ಕೃಷಿ ಭೂ ಪರಿವರ್ತನೆ ತಿದ್ದುಪಡಿ ಮಸೂದೆಯನ್ನು ಜಾರಿಗೊಳಿಸಲು ತೀರ್ಮಾನಿಸಲಾಗಿದೆ ಎಂದರು.
ಲಕ್ಷಾಂತರ ಕಂದಾಯ ನಿವೇಶನಗಳನ್ನು ಭೂ ಪರಿವರ್ತಮೆ ವ್ಯಾಪ್ತಿಗೆ ಯೋಚಿಸಲಾಗಿದೆ. ನಗರ ಪ್ರದೇಶದಲ್ಲಿ ಭೂ ಪರಿವರ್ತನೆಗೆ ಅರ್ಜಿ ನೀಡಿದ ಏಳು ದಿನದಲ್ಲಿ ಅರ್ಜಿ ವಿಲೇವಾರಿ ಮಾಡಬೇಕು, ಇಲ್ಲವಾದರೆ 15 ದಿನಗಳಲ್ಲಿ ತನ್ನಿಂತಾನೆ ಮಂಜೂರಾತಿ ಸಿಗಲಿದೆ. ಅದೇ ರೀತಿ ಗ್ರಾಮೀಣ ಭಾಗದಲ್ಲಿ 15 ದಿನಗಳಲ್ಲಿ ವಿಲೇವಾರಿ ಮಾಡದಿದ್ದರೆ ತಿಂಗಳಿನಲ್ಲಿ ಮಂಜೂರಾತಿ ಸಿಕ್ಕಂತಾಗಲಿದೆ. ಅಶೋಕ್ ಸಾರ್ವಜನಿಕರ ಅನುಕೂಲಕ್ಕಾಗಿ ಸುಗ್ರೀವಾಜ್ಞೆ ಮೂಲಕ ರಾಜ್ಯದಲ್ಲಿ ಕೃಷಿ ಭೂ ಪರಿವರ್ತನೆ ತಿದ್ದುಪಡಿ ಮಸೂದೆಯನ್ನು ಜಾರಿಗೊಳಿಸಲು ತೀರ್ಮಾನಿಸಲಾಗಿದೆ ಎಂದರು.
Watch Video: ಕೋಲ್ಕತ್ತಾದಲ್ಲಿ ಕಳೆಗಟ್ಟಿದ ʻದುರ್ಗಾ ಪೂಜೆʼ… ‘ಧಕ್’ ಬಾರಿಸಿ ಸಂಭ್ರಮಿಸಿದ ಸಿಎಂ ʻಮಮತಾ ಬ್ಯಾನರ್ಜಿʼ