ಉಧಂಪುರ: ಇಂದು ಬೆಳಗ್ಗೆ 6:00 ಗಂಟೆ ಸುಮಾರಿಗೆ ಜಮ್ಮು ಮತ್ತು ಕಾಶ್ಮೀರದ ಉಧಂಪುರ ಜಿಲ್ಲೆಯ ಹಳೆ ಬಸ್ ನಿಲ್ದಾಣದಲ್ಲಿ ನಿಂತಿದ್ದ ಬಸ್ನಲ್ಲಿ ಬಾಂಬ್ ಸ್ಫೋಟ ಸಂಭವಿಸಿದೆ. ಇದು ಕಳೆದ 8 ಗಂಟೆಗಳ ಅವಧಿಯಲ್ಲಿ ಸಂಭವಿಸಿದ 2ನೇ ಘಟನೆಯಾಗಿದೆ.
ಘಟನೆಯಲ್ಲಿ ಯಾವುದೇ ಹಾನಿಯಾಗಿದ್ದ. ಸುದ್ದಿ ತಿಳಿಯುತ್ತಿದ್ದಂತೇ ಘಟನಾ ಸ್ಥಳಕ್ಕೆ ಧಾವಿಸಿದ ಪೊಲೀಸರು ಮತ್ತು ಭದ್ರತಾ ಸಿಬ್ಬಂದಿ ಸ್ಥಳಕ್ಕೆ ತನಿಖೆ ನಡೆಸುತ್ತಿದ್ದಾರೆ.
ಇದಕ್ಕೂ ಮುನ್ನ, ಕಳೆದ ರಾತ್ರಿ 10:45 ಕ್ಕೆ ಉಧಂಪುರ ಜಿಲ್ಲೆಯ ಡೊಮೈಲ್ ಚೌಕ್ನಲ್ಲಿರುವ ಪೆಟ್ರೋಲ್ ಪಂಪ್ ಬಳಿ ನಿಂತಿದ್ದ ಖಾಲಿ ಬಸ್ನಲ್ಲಿ ಸ್ಫೋಟ ಸಂಭವಿಸಿ ಇಬ್ಬರು ಗಾಯಗೊಂಡಿದ್ದರು. ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ವೇಳೆ ಬಸ್ ಪಕ್ಕದಲ್ಲಿ ನಿಲ್ಲಿಸಿದ್ದ ಇತರ ವಾಹನಗಳಿಗೂ ಹಾನಿಯಾಗಿದೆ.
#WATCH | J&K: A blast occurred in an empty passenger bus parked near a petrol pump at Domail Chowk in Udhampur at around 10:30 pm. Two persons were injured and have been shifted to the District hospital. Police & other agencies reached the spot.
(CCTV Visuals verified by Police) pic.twitter.com/3ESVXPdufP
— ANI (@ANI) September 28, 2022
BIGG NEWS : ಶೃಂಗೇರಿ ಶಾಸಕ ಟಿ.ಡಿ ರಾಜೇಗೌಡರಿಗೆ ಕೊಲೆ ಬೆದರಿಕೆ |T.D Rajegowda