ನವದೆಹಲಿ: ಎಲ್ಲಾ ಮಹಿಳೆಯರು ಸುರಕ್ಷಿತ ಮತ್ತು ಕಾನೂನುಬದ್ಧ ಗರ್ಭಪಾತಕ್ಕೆ ಅರ್ಹರು ಅಂಥ ಸುಪ್ರೀಂ ಕೋರ್ಟ್ ಮಹತ್ವದ ಅಭಿಪ್ರಾಯವನ್ನು ವ್ಯಕ್ತಪಡಿಸಿದೆ. ಎಲ್ಲಾ ಮಹಿಳೆಯರು, ವಿವಾಹಿತರಾಗಿರಲಿ ಅಥವಾ ಅವಿವಾಹಿತರಾಗಿರಲಿ, ಸುರಕ್ಷಿತ ಮತ್ತು ಕಾನೂನುಬದ್ಧ ಗರ್ಭಪಾತಕ್ಕೆ ಅರ್ಹರಾಗಿದ್ದಾರೆ ಅಂತ ಸುಪ್ರೀಂ ಕೋರ್ಟ್ ಹೇಳಿದೆ.
ಮಹಿಳೆಯರ ಕಾನೂನುಬದ್ಧ ಗರ್ಭಪಾತದ ಬಗ್ಗೆ ಸುಪ್ರೀಂ ಕೋರ್ಟ್ ದೊಡ್ಡ ಪ್ರತಿಕ್ರಿಯೆ ನೀಡಿದೆ. ಎಲ್ಲಾ ಮಹಿಳೆಯರು, ವಿವಾಹಿತರಾಗಿರಲಿ ಅಥವಾ ಅವಿವಾಹಿತರಾಗಿರಲಿ, ಸುರಕ್ಷಿತ ಮತ್ತು ಕಾನೂನುಬದ್ಧ ಗರ್ಭಪಾತಕ್ಕೆ ಅರ್ಹರಾಗಿದ್ದಾರೆ ಎಂದು ಸುಪ್ರೀಂ ಕೋರ್ಟ್ ಗುರುವಾರ ಹೇಳಿದೆ.
ಇದೇ ವೇಳೆ ನ್ಯಾಯಪೀಠವು ಗಂಡಂದಿರಿಂದ ಲೈಂಗಿಕ ದೌರ್ಜನ್ಯವು ಅತ್ಯಾಚಾರದ ರೂಪವನ್ನು ತೆಗೆದುಕೊಳ್ಳಬಹುದು, ಮತ್ತು ಅತ್ಯಾಚಾರದ ಅರ್ಥವು ಎಂಟಿಪಿ ಕಾಯ್ದೆ ಮತ್ತು ಗರ್ಭಪಾತದ ಉದ್ದೇಶಗಳಿಗಾಗಿ ನಿಯಮಗಳ ಅಡಿಯಲ್ಲಿ ವೈವಾಹಿಕ ಅತ್ಯಾಚಾರದ ಅರ್ಥವನ್ನು ಒಳಗೊಂಡಿರಬೇಕು ಎಂದು ಸುಪ್ರೀಂ ಕೋರ್ಟ್ ತೀರ್ಪು ನೀಡಿದೆ. ಅವಿವಾಹಿತ ಮಹಿಳೆಯೂ ವಿವಾಹಿತ ಮಹಿಳೆಯರಿಗೆ ಸರಿಸಮನಾಗಿ 24 ವಾರಗಳವರೆಗೆ ಗರ್ಭಪಾತಕ್ಕೆ ಒಳಗಾಗಬಹುದು ಎಂದು ಘೋಷಿಸಲು ಕೋರ್ಟ್ ಎಂಟಿಪಿ ಕಾಯ್ದೆಯನ್ನು ವ್ಯಾಖ್ಯಾನಿಸಿದೆ.