ಮೈಸೂರು : ಮೈಸೂರಿನಲ್ಲಿ ಒಲಂಪಿಕ್ ಪದಕ ವಿಜೇತೆ ಕುಸ್ತಿಪಟು ಸಾಕ್ಷಿ ಮಲ್ಲಿಕ್ ದಸರಾ ಕ್ರೀಡಾಕೂಟ ಉದ್ಘಾಟನೆ ಮಾಡಲಿದ್ದಾರೆ.
ಇಂದು ಸಂಜೆ 4.30ಕ್ಕೆ ಚಾಮುಂಡಿ ವಿಹಾರ ಕ್ರೀಡಾಂಗಣದಲ್ಲಿ ಕ್ರೀಡಾಜ್ಯೋತಿ ಬೆಳಗಿಸುವ ಮೂಲಕ ಒಲಂಪಿಕ್ ಪದಕ ವಿಜೇತೆ ಕುಸ್ತಿಪಟು ಸಾಕ್ಷಿ ಮಲ್ಲಿಕ್ರಿಂದ ದಸರಾ ಕ್ರೀಡಾಕೂಟಕ್ಕೆ ಚಾಲನೆ ನೀಡಲಿದ್ದಾರೆ.
ರಾಜ್ಯದ ನಾನಾ ಜಿಲ್ಲೆಗಳಿಂದ ಸುಮಾರು 4500 ಕ್ರೀಡಾಪಟುಗಳು ಭಾಗವಹಿಸಲಿದ್ದು, ಕ್ರೀಡಾ ಸಚಿವ ನಾರಾಯಣಗೌಡ ಸೇರಿದಂತೆ ಹಲವು ಗಣ್ಯರು ಭಾಗಿಯಾಗಲಿದ್ದಾರೆ.