ಬೆಂಗಳೂರು: PSI ನೇಮಕಾತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಎಡಿಜಿಪಿ ಅಮೃತ್ ಪಾಲ್ ಅವರಿಗೆ ಬೇನಾಮಿ ವ್ಯಕ್ತಿಯಾಗಿ ಗುರುತಿಸಿಕೊಂಡಿದ್ದ ಶಂಭುಲಿಂಗ ಸ್ವಾಮಿ ನಡುವೆ ಹಣಕಾಸಿನ ವ್ಯವಹಾರದಲ್ಲಿದ್ದ ‘ಡಬಲ್ ಝೀರೋ’ ಕೋಡ್ನ್ನು ಸಿಐಡಿ ಪೊಲೀಸರು ಪತ್ತೆ ಹಚ್ಚಿದ್ದಾರೆ.
ಪರೀಕ್ಷಾ ನೇಮಕಾತಿ ಜಾಲದಲ್ಲಿ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ 35ನೇ ಆರೋಪಿಯಾಗಿರುವ ಅಮೃತ್ ಪಾಲ್ ವಿರುದ್ಧ 1,406 ಪುಟಗಳ ಹೆಚ್ಚುವರಿ ದೋಷಾರೋಪ ಪಟ್ಟಿಯನ್ನು ಸಿಐಡಿ 1ನೇ ಎಸಿಎಂಎಂ ನ್ಯಾಯಾಲಯಕ್ಕೆ ಸಲ್ಲಿಸಿದೆ. ಅಮೃತ್ ಪಾಲ್ ಎಸಗಿರುವ ಅಕ್ರಮವನ್ನ ಇಂಚಿಂಚು ಮಾಹಿತಿ ಸಂಗ್ರಹಿಸಿ ಚಾರ್ಜ್ ಶೀಟ್ನಲ್ಲಿ ಉಲ್ಲೇಖಿಸಿರುವ ಸಿಐಡಿ, ಆಭ್ಯರ್ಥಿಗಳಿಂದ ಪಡೆದ ಹಣವನ್ನು ಯಾರಿಗೂ ತಿಳಿಯದಂತೆ ವ್ಯವಹಾರ ನಡೆಸಬೇಕು ಎಂಬುದರ ಬಗ್ಗೆ ಅಮೃತ್ ಪಾಲ್ ಶಂಭುಲಿಂಗಸ್ವಾಮಿಯೊಂದಿಗೆ ಮಾತುಕತೆ ನಡೆಸಿದ್ದರು.
ಅಭ್ಯರ್ಥಿಗಳು ಹಾಗೂ ಮಧ್ಯವರ್ತಿಗಳಿಂದ ಪಡೆದಿದ್ದ ಹಣವನ್ನು ಪಾಲ್ ನೇರವಾಗಿ ತೆಗೆದುಕೊಳ್ಳದೆ ಶಂಭುಲಿಂಗ ಮೂಲಕ ವ್ಯವಹರಿಸುತ್ತಿದ್ದರು. ಹಲವು ಅಭ್ಯರ್ಥಿಗಳಿಂದ 1.41 ಕೋಟಿ ರೂಪಾಯಿ ಹಣವನ್ನು ಶಂಭುಲಿಂಗ ತೆಗೆದಿರಿಸಿಕೊಂಡಿದ್ದರು. ಆಭ್ಯರ್ಥಿಗಳಿಂದ ಪಡೆದುಕೊಂಡ ಹಣವನ್ನು ಕಂಪ್ಯೂಟರ್ನಲ್ಲಿ ಟೈಪ್ ಮಾಡಿ ಪೆನ್ಡ್ರೈವ್ನಲ್ಲಿ ಸೇವ್ ಮಾಡಿಕೊಂಡಿದ್ದರು ಎಂದು ಚಾರ್ಜ್ ಶೀಟ್ನಲ್ಲಿ ಉಲ್ಲೇಖಿಸಲಾಗಿದೆ.