ಕೆಎನ್ಎನ್ಡಿಜಿಟಲ್ ಡೆಸ್ಕ್ : ಬಂಗಾಳಕೊಲ್ಲಿಯಲ್ಲಿ ಮೇಲ್ಮೈ ಸುಳಿಗಾಳಿ ಹಿನ್ನಲೆ, ರಾಜ್ಯದ ಹಲವು ಕಡೆ ಮತ್ತೆ ಮಳೆ ಜೋರಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ಇಂದು ಶುಕ್ರವಾರ ಬೆಳಗ್ಗೆ 8 : 30 ರಿಂದ ಶನಿವಾರದವರೆಗೆ ಶಿವಮೊಗ್ಗ, ದಾವಣಗೆರೆ, ಹಾವೇರಿ, ರಾಮನರ ಜಿಲ್ಲೆಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ, ಹಾಗೂ ದಕ್ಷಿಣ ಹಾಗೂ ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಇಂದಿನಿಂದ ಅ. 2ರವರೆಗೂ ಗುಡುಗು ಸಹಿತ ಮಳೆಯಾಗಲಿದೆ ಎಂದು ರಾಜ್ಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕರಾವಳಿ ಜಿಲ್ಲೆಗಳಲ್ಲಿ ಮುಂದಿನ ಎರಡು ದಿನ ಕೆಲವೆಡೆ ಮಳೆಯಾಗುವ ಸಾಧ್ಯತೆ ಇದೆ. ಕರ್ನಾಟಕದಾದ್ಯಂತ ಇಂದು ಮತ್ತು ನಾಳೆ ಕೆಲವು ಜಿಲ್ಲೆಗಳಲ್ಲಿ ಗುಡುಗಿನಿಂದ ಕೂಡಿದ ಮಳೆಯಾಗುವ ಸಾಧ್ಯತೆ ಇದೆ.
ರಾಜಧಾನಿ ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ ಇರಲಿದ್ದು, ಸಂಜೆ ವೇಳೆ ಮಳೆಯ ಸಿಂಚನ ಇರಲಿದೆ. ನಿನ್ನೆ ಸಹ ತುಂತುರು ಮಳೆಯಾಗಿದೆ. ಈ ಬಾರಿ ವಾಡಿಕೆಗಿಂತಲೂ ಹೆಚ್ಚಾಗಿ ಸುರಿದ ಮಳೆ ಪ್ರಭಾವದಿಂದಾಗಿ ಕಳೆದ ವರ್ಷಕ್ಕೆ ಹೋಲಿಸಿದರೆ ಈ ವರ್ಷ ರಾಜ್ಯದ ಬಹುತೇಕ ಜಲಾಶಯಗಳು ಭರ್ತಿಯಾಗಿವೆ.
ಗಂಟುರೋಗದಿಂದ ಮೃತಪಟ್ಟ ಜಾನುವಾರುಗಳಿಗೆ 20 ಸಾವಿರ ರೂ ಪರಿಹಾರ – ಸಿಎಂ ಬೊಮ್ಮಾಯಿ ಘೋಷಣೆ | Lumpy Skin Disease