ದೆಹಲಿ: ಕಾಂಗ್ರೆಸ್(Congress) ಅಧ್ಯಕ್ಷ ಸ್ಥಾನಕ್ಕೆ ಪ್ರಬಲ ಸ್ಪರ್ಧಿಯಾಗಿದ್ದ ರಾಜಸ್ಥಾನ ಸಿಎಂ ಅಶೋಕ್ ಗೆಹ್ಲೋಟ್ ಚುನಾವಣೆಯಿಂದ ಹಿಂದೆ ಸರಿದಿದ್ದು, ಇದರ ಬೆನ್ನಲ್ಲೇ ಮತ್ತೊಂದು ಸ್ಪರ್ಧಿಯ ಹೆಸರು ಕೇಳಿಬಂದಿದೆ.
ರಾಜ್ಯಸಭೆಯ ವಿರೋಧಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ(Mallikarjun Kharge) ಅವರು ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಲು ಕಣಕ್ಕಿಳಿಯಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ಇನ್ನೂ, ‘ಒಬ್ಬ ವ್ಯಕ್ತಿ ಒಂದು ಹುದ್ದೆ’ ನಿಯಮದ ಪ್ರಕಾರ, ಖರ್ಗೆ ಅವರು ರಾಜ್ಯಸಭೆಯ ಪ್ರತಿಪಕ್ಷ ನಾಯಕ ಸ್ಥಾನಕ್ಕೆ ರಾಜೀನಾಮೆ ನೀಡುವ ಸಾಧ್ಯತೆಯಿದ್ದು, ಕೊನೇ ಕ್ಷಣದಲ್ಲಿ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಲು ಖರ್ಗೆ ಎಂಟ್ರಿ ಕೊಟ್ಟಿದ್ದಾರೆ ಎನ್ನಲಾಗಿದೆ.
ಅಕ್ಟೋಬರ್ 17 ರಂದು ನಡೆಯಲಿರುವ ಚುನಾವಣೆಗೆ ರಾಜ್ಯಸಭೆಯ ವಿರೋಧ ಪಕ್ಷದ ನಾಯಕರಾದ ಖರ್ಗೆ ಇಂದು ದಿಗ್ವಿಜಯ ಸಿಂಗ್ ಮತ್ತು ಶಶಿ ತರೂರ್ ಅವರೊಂದಿಗೆ ಮೂರನೇ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ತರೂರ್ ಮತ್ತು ದಿಗ್ವಿಜಯ ಸಿಂಗ್ ಕೂಡ ಇಂದು ಮಧ್ಯಾಹ್ನ ನಾಮಪತ್ರ ಸಲ್ಲಿಸುವ ಸಾಧ್ಯತೆಯಿದೆ.
ಸರ್ಕಾರವೇ ಕೆಲವು ಸಂಘಟನೆಗಳಿಗೆ ತ್ರಿಶೂಲ ಕೊಟ್ಟು ತರಬೇತಿ ನೀಡುತ್ತಿದೆ : H.D ಕುಮಾರಸ್ವಾಮಿ