ಚಾಮರಾಜನಗರ: ಕಾಂಗ್ರೆಸ್ ಪಕ್ಷವು ದೇಶವ್ಯಾಪಿ ನಡೆಸಲು ಉದ್ದೇಶಿಸಿರುವ ಭಾರತ್ ಜೋಡೋ ಯಾತ್ರೆ ಆರಂಭವಾಗಿದೆ. ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆಲ್ಲಿ ಬೃಹತ್ ಸಮಾವೇಶ ನಡೆಯುತ್ತಿದೆ. ಈ ವೇಳೆ ಮಾತನಾಡಿದ ಮಾಜಿ ಸಿಎಂ ಸಿದ್ದರಾಮಯ್ಯ, ಬಿಜೆಪಿ ಪ್ರಜಾಪ್ರಭುತ್ವದಲ್ಲಿ ನಂಬಿಕೆ ಇಟ್ಟಿರುವ ಪಕ್ಷ ಅಲ್ಲ. ಸಂವಿಧಾನದ ಮೇಲೆ ನಂಬಿಕೆ ಇಲ್ಲ ಎಂದು ಬಿಜೆಪಿ ವಿರುದ್ಧ ಕಿಡಿಕಾರಿದ್ದಾರೆ.
BIGG NEWS: ಜನಸಾಮಾನ್ಯರಿಗೆ ಗುಡ್ ನ್ಯೂಸ್: ಸಾರ್ವಜನಿಕರಿಂದ ಖಾಸಗಿ ವಾಹನಗಳು ದುಬಾರಿ ಹಣ ವಸೂಲಾತಿಗೆ ಬ್ರೇಕ್
ಬಿಜೆಪಿಗೆ ಸಂವಿಧಾನದ ಮೇಲೆ ಗೌರವ ವಿಲ್ಲ. ಅಂಬೇಡ್ಕರ್ ಕಾಲದಿಂದಲೂ ಬಿಜೆಪಿ ಸಂವಿಧಾನ ವಿರೋಧಿಸುತ್ತಿದೆ. ಬಿಜೆಪಿಯ ಅನೇಕ ಸಂಸದರು, ನಾಯಕರು ಸಂವಿಧಾನವನ್ನು ಟೀಕಿಸಿದ್ದಾರೆ. ಬಿಜೆಪಿ ವರಿಷ್ಠ ನಾಯಕರಿಗೆ ಇದೆಲ್ಲ ಗೊತ್ತಿಲ್ವಾ? ಎಂದು ಸಿದ್ದರಾಮಯ್ಯ ಪ್ರಶ್ನೆ ಮಾಡಿದ್ದಾರೆ. ಇನ್ನು ದೇಶದಲ್ಲಿ ಕೋಮುವಾದ, ದ್ವೇಷದ ರಾಜಕಾರಣ ಮಾಡುತ್ತಿದ್ದಾರೆ ಎಂದು ಬಿಜೆಪಿ ವಿರುದ್ಧ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ.