ಚಾಮರಾಜನಗರ: ಕಾಂಗ್ರೆಸ್ ಪಕ್ಷವು ದೇಶವ್ಯಾಪಿ ನಡೆಸಲು ಉದ್ದೇಶಿಸಿರುವ ಭಾರತ್ ಜೋಡೋ ಯಾತ್ರೆ ಶುರುವಾಗಿದೆ. ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆಲ್ಲಿ ಬೃಹತ್ ಸಮಾವೇಶ ನಡೆಯುತ್ತಿದೆ. ಈ ವೇಳೆ ಸಿಎಂ ಸಿದ್ದರಾಮಯ್ಯ ಮಾತನಾಡಿ, ಬಿಜೆಪಿ ವಿರುದ್ಧ ಕಿಡಿಕಾರಿದ್ದಾರೆ.
ಕಾಂಗ್ರೆಸ್ ಭಾರತ್ ಜೋಡೋ ಯಾತ್ರೆ ಕಿಡಿಗೇಡಿಗಳು ಪೋಸ್ಟರ್ ಅನ್ನು ಹರಿದು ಹಾಕಿದ ವಿಚಾರವಾಗಿ ಮಾತನಾಡಿ, ನಮ್ಮ ಪೋಸ್ಟರ್ಗಳನ್ನು ಹರಿದು ಹಾಕುತ್ತಿದ್ದಾರೆ. ಇದೇ ರೀತಿ ಮಾಡಿದ್ರೆ ಬಿಜೆಪಿಯವರು ಓಡಾಡದ ರೀತಿ ಮಾಡುತ್ತೇವೆ ಎಂದು ಎಚ್ಚರಿಕೆ ಕೊಟ್ಟಿದ್ದಾರೆ.
ಪೊಲೀಸರಿಗೆ ಹೇಳುತ್ತೇನಿ ಆರು ತಿಂಗಳಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರುತ್ತದೆ. ಪೊಲೀಸ್ ನವರು ಇದನ್ನ ಗಮನದಲ್ಲಿ ಇಟ್ಟುಕೊಳ್ಳಬೇಕು. ನೀವು ಕೂಡ ಬಿಜೆಪಿ ಜೊತೆ ಶಾಮೀಲಾದ್ರೆ ನಿಮಗೆ ತಕ್ಕಪಾಠ ಕಲಿಸುತ್ತೇವೆ ಎಂದು ಪೊಲೀಸರಿಗೆ ಸಿದ್ದರಾಮಯ್ಯ ಎಚ್ಚರಿಕೆ ಕೊಟ್ಟಿದ್ದಾರೆ.