ವಿಜಯಪುರ : ಆರ್ಎಸ್ಎಸ್ ನಿಷೇಧಿಸಬೇಕು ಎನ್ನುವ ಸಿದ್ದರಾಮಯ್ಯ ಹೇಳಿಕೆಯೇ ದೊಡ್ಡ ದುರ್ದೈವ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು.
ವಿಜಯಪುರದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು ಆರ್ಎಸ್ಎಸ್ ನಿಷೇಧಿಸಬೇಕು ಎನ್ನುವ ಸಿದ್ದರಾಮಯ್ಯ ಹೇಳಿಕೆಯೇ ದೊಡ್ಡ ದುರ್ದೈವ,ಸಿದ್ದರಾಮಯ್ಯ ಈ ಮಟ್ಟಕ್ಕೆ ಇಳಿಯಬಾರದಿತ್ತು ಎಂದು
ದೇಶಪ್ರೇಮಿಗಳು ಹಾಗೂ ಬಡವರಿಗೆ ನೆರವಾಗುತ್ತಿರುವ ಸಂಘಟನೆ ಆರ್ಎಸ್ಎಸ್ , ದೇಶ ಸಮಸ್ಯೆಗಳಿಗೆ ಸಿಲುಕಿದಾಗ ಆರ್ಎಸ್ಎಸ್ ಹಲವು ರೀತಿಯಲ್ಲಿ ನೆರವಿಗೆ ಬಂದಿದೆ. ದೇಶದಲ್ಲಿ ದೇಶಪ್ರೇಮ ಜಾಗೃತಿ ಮಾಡುತ್ತಿರುವ ಸಂಘಟನೆಯನ್ನು ನಿಷೇಧಿಸಬೇಕು ಎನ್ನುವುದು ದುರ್ದೈವ ಎಂದರು.
ವಿಜಯಪುರ ಜಿಲ್ಲಾ ಪ್ರವಾಸ ಕೈಗೊಂಡಿರುವ ಸಿಎಂ ಬೊಮ್ಮಾಯಿ ಹುಬ್ಬಳ್ಳಿಯಿಂದ ಹೆಲಿಕಾಪ್ಟರ್ ಮೂಲಕ ಬೆಳಿಗ್ಗೆ 10 ಗಂಟೆಗೆ ಜಿಲ್ಲೆಯ ನಿಡಗುಂದಿ ತಾಲೂಕಿನ ಆಲಮಟ್ಟಿಗೆ ಆಗಮಿಸಿದ್ದಾರೆ. ನಂತರ ಸಿಎಂ ಬೊಮ್ಮಾಯಿ ಆಲಮಟ್ಟಿ ಜಲಾಶಯಕ್ಕೆ ಗಂಗಾಪೂಜೆ ನೆರವೇರಿಸಿ, ಬಾಗಿನ ಅರ್ಪಿಸಲಿದ್ದಾರೆ.
BIG NEWS: ಜ. 2023 ರಿಂದ ಕ್ಲೌಡ್ ಗೇಮಿಂಗ್ ಸೇವೆ ʻಗೂಗಲ್ ಸ್ಟೇಡಿಯಾʼ ಸ್ಥಗಿತಗೊಳಿಸಲು Google ನಿರ್ಧಾರ… ಕಾರಣ?