ನವದೆಹಲಿ: ಕಾಂಗ್ರೆಸ್ ಅಧ್ಯಕ್ಷರ ಚುನಾವಣೆ ಪ್ರಕ್ರಿಯೆ ಆರಂಭವಾಗುತ್ತಿದ್ದಂತೆ ಪಕ್ಷದಲ್ಲಿ ಗೊಂದಲ ವಾತಾವರಣ ನಿರ್ಮಾಣವಾಗಿದೆ. ಇಂದು (ಸೆಪ್ಟೆಂಬರ್ 30) ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾಗಿದ್ದು, ದಿಗ್ವಿಜಯ್ ಸಿಂಗ್ ಕಾಂಗ್ರೆಸ್ ಅಧ್ಯಕ್ಷೀಯ ಚುನಾವಣೆ ರೇಸ್ನಿಂದ ಹಿಂದೆ ಸರಿದಿದ್ದಾರೆ. ಈ ವಿಚಾರವನ್ನು ಅವರೇ ಸ್ವತಃ ಘೋಷಣೆ ಮಾಡಿದ್ದಾರೆ.
Digvijaya Singh drops out of Congress presidential race, announces support to Kharge
Read @ANI Story | https://t.co/TNkWCAqSSV#DigvijayaSingh #CongressPresidentPolls #MallikarjunKharge #ShashiTharoor #Congress pic.twitter.com/D1mjInMoCM
— ANI Digital (@ani_digital) September 30, 2022
ಮಲ್ಲಿಕಾರ್ಜುನ್ ಖರ್ಗೆ ಹೆಸರು ಮುಂಚೂಣಿ: ಸದ್ಯದ ಬೆಳವಣಿಗೆಗಳನ್ನು ಗಮನಿಸಿದರೆ ಮುಂದಿನ ತಿಂಗಳು ನಡೆಯುವ ಕಾಂಗ್ರೆಸ್ ಅಧ್ಯಕ್ಷ ಚುನಾವಣೆಗೆ ಗೆಹ್ಲೋಟ್ ಕಣಕ್ಕಿಳಿಯುವ ಸಾಧ್ಯತೆ ತೀರಾ ಕಡಿಮೆ ಇದೆ ಎನ್ನಲಾಗಿದೆ. ಹೀಗಾಗಿ ಮಲ್ಲಿಕಾರ್ಜುನ ಖರ್ಗೆ ಅವರ ಹೆಸರು ಮತ್ತೆ ಮುಂಚೂಣಿಗೆ ಬಂದಿದೆ ಎಂದು ಮೂಲಗಳು ಹೇಳಿವೆ. ಹೈಕಮಾಂಡ್ ಯಾವುದೇ ಜವಾಬ್ದಾರಿ ಕೊಟ್ಟರೂ ಅದನ್ನು ಶಿರಸಾ ಪಾಲಿಸುವೆ ಎಂಬ ಮಾಹಿತಿಯನ್ನು ಬಹಳ ಹಿಂದೆಯೇ ಖರ್ಗೆ ಅವರು ಸೋನಿಯಾಗೆ ತಿಳಿಸಿರುವುದನ್ನು ಗಮನಿಸಬಹುದು. ಹೀಗಾಗಿ ಸೋನಿಯಾ ಅವರು ಖರ್ಗೆ ಅವರನ್ನೇ ಕಣಕ್ಕಿಳಿಸುವುದು ಬಹುತೇಕ ಖಚಿತ ಎನ್ನಲಾಗಿದೆ.
ಕೊನೆಯದಾಗಿ ಪಕ್ಷ ಖರ್ಗೆಗೆ ಏನು ಹೇಳುತ್ತದೆಯೋ ಅದನ್ನು ಅವರು ಮಾಡುತ್ತಾರೆ ಎಂದು ಖರ್ಗೆ ಅವರ ಆಪ್ತರೊಬ್ಬರು ತಿಳಿಸಿದ್ದಾರೆ. ಪಕ್ಷದ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸುವಂತೆ ಒಂದು ವೇಳೆ ಸೋನಿಯಾ ಸೂಚಿಸಿದರೆ ಅದಕ್ಕೆ ಖರ್ಗೆ ನಿರಾಕರಿಸುವುದಿಲ್ಲ ಎಂದು ಪಕ್ಷದ ಮೂಲಗಳು ಹೇಳಿವೆ. ಇನ್ನು ಮಲ್ಲಿಕಾರ್ಜುನ ಖರ್ಗೆ ಎನ್ಸಿಪಿ ಮುಖ್ಯಸ್ಥ ಶರದ್ ಪವಾರ್, ಸಿಪಿಎಂ ಪ್ರಧಾನ ಕಾರ್ಯದರ್ಶಿ ಸೀತಾರಾಂ ಯೆಚೂರಿ ಅವರಂತಹ ವಿರೋಧ ಪಕ್ಷಗಳ ನಾಯಕರ ಜತೆ ಉತ್ತಮ ಸಂಪರ್ಕ ಹಾಗೂ ಸಂಬಂಧ ಇರಿಸಿಕೊಂಡಿದ್ದಾರೆ. ಖರ್ಗೆ ಅವರ ಬದ್ಧತೆ ಮತ್ತು ಕಾರ್ಯವೈಖರಿಯು ಪಕ್ಷಕ್ಕೆ ಇನ್ನಷ್ಟು ಲಾಭ ಉಂಟುಮಾಡಲಿದೆ ಎಂದು ಮತ್ತೊಬ್ಬ ಕಾಂಗ್ರೆಸ್ ನಾಯಕರು ತಿಳಿಸಿದ್ದಾರೆ.