ಮಂಗಳೂರು : ಪಿಎಫ್ಐ ವಿರುದ್ಧ ಕಾರ್ಯಾಚರಣೆ ನಡೆಸುತ್ತಿರುವ ಎನ್ಐಎ (NIA) ಅಧಿಕಾರಿಗಳು ದಿನದಿಂದ ದಿನಕ್ಕೆ ಹಲವು ಸ್ಪೋಟಕ ಮಾಹಿತಿಗಳನ್ನು ಕಲೆಹಾಕುತ್ತಿದ್ದಾರೆ.
ಆರ್ ಎಸ್ ಎಸ್ (RSS) ಕಾರ್ಯಕರ್ತ ಪ್ರವೀಣ್ ನೆಟ್ಟಾರು, ಶರತ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಸ್ಪೋಟಕ ಮಾಹಿತಿಯೊಂದನ್ನು ಕಲೆ ಹಾಕಿದ್ದಾರೆ. ಶರತ್, ಪ್ರವೀಣ್ ಹತ್ಯೆಗೂ ಮುನ್ನ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಮಿತ್ತೂರು ಗ್ರಾಮದ ಪ್ರೀಡಂ ಕಮ್ಯೂನಿಟಿ ಹಾಲ್ ನಲ್ಲಿ ಯುವಕರಿಗೆ ಪಿಎಫ್ಐ ಟೆರರ್ ಟ್ರೈನಿಂಗ್ ನೀಡಲಾಗಿತ್ತು. ಶರತ್, ಪ್ರವೀಣ್ ಕೊಲೆಗೂ ಮುನ್ನ ಹಂತಕರು ಇಲ್ಲಿ ಸಭೆ ನಡೆಸಿದ್ದರು ಎಂಬ ಮಾಹಿತಿ ಲಭ್ಯವಾಗಿದೆ. ಇನ್ನೆರಡು ದಿನದಲ್ಲಿ ಈ ಪ್ರೀಡಂ ಕಮ್ಯೂನಿಟಿ ಹಾಲ್ ನ್ನು ಕೂಡ ಸೀಜ್ ಮಾಡಲಾಗುತ್ತದೆ ಎಂಬ ಮಾಹಿತಿಯನ್ನು ಅಧಿಕಾರಿಗಳು ನೀಡಿದ್ದಾರೆ. ಅಲ್ಲದೇ ಹಿಂದುತ್ವದ ವಿರುದ್ಧದ ಹೋರಾಟಕ್ಕೆ ಪಿಎಫ್ಐ ಸಂಚು ರೂಪಿಸಿತ್ತು, ಹಿಂದುತ್ವ ಹಾಳು ಮಾಡಲು ಪಿಎಫ್ಐ ಭಾರಿ ಪ್ಲ್ಯಾನ್ ಮಾಡಿತ್ತು ಎಂಬ ಮಾಹಿತಿ ತನಿಖೆಯಿಂದ ಲಭ್ಯವಾಗಿದೆ.
ಪಿಎಫ್ಐ (PFI) ಟೆರರ್ ಟ್ರೈನಿಂಗ್
ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ, ಪುತ್ತೂರು, ಸುಳ್ಯದ ಕಡೆ ಪಿಎಫ್ಐ ಟೆರರ್ ಟ್ರೈನಿಂಗ್ ನೀಡಲಾಗುತ್ತಿತ್ತು ಎಂಬ ಮಾಹಿತಿ ಲಭ್ಯವಾಗಿದೆ. ಮಿತ್ತೂರಿನಲ್ಲಿರುವ ಪ್ರೀಡಂ ಕಮ್ಯೂನಿಟಿ ಹಾಲ್ ನಲ್ಲಿ ಯುವಕರಿಗೆ ಪಿಎಫ್ಐ ಟೆರರ್ ಟ್ರೈನಿಂಗ್ ನೀಡಲಾಗುತ್ತಿತ್ತು ಎಂಬ ಮಾಹಿತಿಯನ್ನು ಕಲೆ ಹಾಕಿದ್ದಾರೆ. 2007 ರಿಂದ ಸಾವಿರಾರು ಯುವಕರಿಗೆ ಟ್ರೈನಿಂಗ್ ನೀಡಲಾಗುತ್ತಿತ್ತು, ಈ ಸಂಬಂಧ ಆಯೂಬ್ ಅಗ್ನಾಡಿ ಎಂಬ ಟ್ರಸ್ಟಿಯನ್ನು ಎನ್ಐಎ ಅಧಿಕಾರಿಗಳು ಬಂಧಿಸಿದ್ದಾರೆ.
ಕೇಂದ್ರ ಸರ್ಕಾರವು ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್ಐ) ಮತ್ತು ಅದರ ಎಂಟು ಅಂಗಸಂಸ್ಥೆಗಳ ಮೇಲೆ ಐದು ವರ್ಷಗಳ ಕಾಲ ನಿಷೇಧ ಹೇರಿದೆ. ಈ ಮೂಲಕ ಪಿಎಫ್ಐ ನ ಎಲ್ಲಾ ಚಟುವಟಿಕೆಗಳಿಗೆ ಬ್ರೇಕ್ ಬಿದ್ದಿದೆ.
SHOCKING NEWS: ಪಂಜಾಬ್ನಲ್ಲಿ ಆಸ್ಪತ್ರೆಗೆ ದಾಖಲಿಸಿಕೊಳ್ಳಲು ನಿರಾಕರಣೆ: ನೆಲದ ಮೇಲೆಯೇ ಮಗುವಿಗೆ ಜನ್ಮ ನೀಡಿದ ಮಹಿಳೆ