ನವದೆಹಲಿ: ಎಐಸಿಸಿ ಕಚೇರಿಗೆ ತೆರಳಿದ ಮಲ್ಲಿಕಾರ್ಜುನ ಖರ್ಗೆ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ನಾಮಪತ್ರವನ್ನು ಸಲ್ಲಿಸಿದ್ದಾರೆ. ರೆ. ನಾಮಪತ್ರ ಹಿಂಪಡೆಯಲು ಅಕ್ಟೋಬರ್ 8 ಕೊನೆಯ ದಿನವಾಗಿದೆ. ಇದಕ್ಕೂ ಮುನ್ನ ದೆಹಲಿಯ ಎಐಸಿಸಿ ಕಚೇರಿಗೆ ತೆರಳಿದ ಮಲ್ಲಿಕಾರ್ಜುನ ಖರ್ಗೆ, ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ನಾನು ನನ್ನ ನಾಮಪತ್ರವನ್ನು ಸಲ್ಲಿಸಲಿದ್ದೇನೆ ಎಂದು ಹೇಳಿದ್ದಾರೆ.
ಮಾಪಣ್ಣ ಮಲ್ಲಿಕಾರ್ಜುನ ಖರ್ಗೆ ಒಬ್ಬ ಭಾರತೀಯ ರಾಜಕಾರಣಿಯಾಗಿದ್ದು, ಅವರು ಪ್ರಸ್ತುತ ರಾಜ್ಯಸಭಾ ಸಂಸತ್ ಸದಸ್ಯರಾಗಿದ್ದಾರೆ, ಫೆಬ್ರವರಿ 16, 2021 ರಿಂದ ರಾಜ್ಯಸಭೆಯ ವಿರೋಧ ಪಕ್ಷದ ನಾಯಕರಾಗಿದ್ದಾರೆ.
ಹಿರಿಯ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು ಪಕ್ಷದ ಅಧ್ಯಕ್ಷ ಸ್ಥಾನಕ್ಕೆ ನಾಮಪತ್ರ ಸಲ್ಲಿಸಿದ್ದಾರೆ. ಅಶೋಕ್ ಗೆಹ್ಲೋಟ್, ದಿಗ್ವಿಜಯ್ ಸಿಂಗ್ ಮತ್ತು ಭೂಪಿಂದರ್ ಹೂಡಾ ಸೇರಿದಂತೆ ಕಾಂಗ್ರೆಸ್ ನಾಯಕರು ಖರ್ಗೆ ಅವರನ್ನು ಬೆಂಬಲಿಸಿ ಪಕ್ಷದ ಪ್ರಧಾನ ಕಚೇರಿಯಲ್ಲಿ ಹಾಜರಿದ್ದರು. ಇದಕ್ಕೂ ಮುನ್ನ ಕಾಂಗ್ರೆಸ್ ನಾಯಕ ಶಶಿ ತರೂರ್ ನಾಮಪತ್ರ ಸಲ್ಲಿಸಿದ್ದರು. ಜಾರ್ಖಂಡ್ ಕಾಂಗ್ರೆಸ್ ನಾಯಕ ಕೆ.ಎನ್.ತ್ರಿಪಾಠಿ ಕೂಡ ನಾಮಪತ್ರ ಸಲ್ಲಿಸಿದ್ದಾರೆ. ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್, “ಅಧ್ಯಕ್ಷರಾಗದ ಬಗ್ಗೆ ನನಗೆ ಯಾವುದೇ ಪಶ್ಚಾತ್ತಾಪವಿಲ್ಲ, ನಾನು ಮಲ್ಲಿಕಾರ್ಜುನ ಖರ್ಗೆ ಅವರ ಪ್ರಸ್ತಾಪಕನಾಗಿದ್ದೇನೆ ಅಂತ ಹೇಳಿದ್ದಾರೆ.