ಬೆಂಗಳೂರು: ಹೈಕೋರ್ಟ್ ಆದೇಶವನ್ನು ಮನ್ನಿಸಿ ಸಿದ್ಧಪಡಿಸಿರುವ ಸಿಇಟಿ ಪರಿಷ್ಕೃತ ರಾಂಕಿಂಗ್ ಪಟ್ಟಿಯನ್ನು ಶನಿವಾರ (ಅಕ್ಟೋಬರ್ 1) ಮಧ್ಯಾಹ್ನ 2 ಗಂಟೆಗೆ ಪ್ರಕಟಿಸಲಾಗುವುದು ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್ ಅಶ್ವತ್ಥನಾರಾಯಣ ಅವರು ತಿಳಿಸಿದ್ದಾರೆ. ಫಲಿತಾಂಶವನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ವೆಬ್ ಸೈಟ್ karresults.nic.in ನಲ್ಲಿ ನೋಡಬಹುದು ಎಂದು ಅವರು ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಸಚಿವರು ಇಲ್ಲವೇ ಅಧಿಕಾರಿಗಳು ಶನಿವಾರ (ಅಕ್ಟೋಬರ್ 1) ಮಧ್ಯಾಹ್ನ 2 ಗಂಟೆಗೆ kea.kar.nic.in ಪರಿಷ್ಕೃತ ರಾಂಕಿಂಗ್ ಕೆಸಿಇಟಿ 2022 ಘೋಷಿಸಿದ್ದಾರೆ. ಕೆಸಿಇಟಿ 2022 ರ ಫಲಿತಾಂಶವನ್ನು ಪರಿಶೀಲಿಸಲು ಈ ಕೆಳಗಿನ ಹಂತಗಳನ್ನು ಅನುಸರಿಸಬಹುದಾಗಿದೆ.
CET ಪರಿಷ್ಕೃತ ರಾಂಕಿಂಗ್ ಪರಿಶೀಲಿಸಲು ಹಂತಗಳು
- kea.kar.nic.in ಭೇಟಿ ನೀಡಿ
- ಕೆಸಿಇಟಿ ಪರಿಷ್ಕೃತ ಫಲಿತಾಂಶ 2022 ಲಿಂಕ್ ಮೇಲೆ ಕ್ಲಿಕ್ ಮಾಡಿ.
- ನೋಂದಣಿ ಸಂಖ್ಯೆಯನ್ನು ನಮೂದಿಸಿ.
- “ಸಬ್ಮಿಟ್” ಮೇಲೆ ಕ್ಲಿಕ್ ಮಾಡಿ.
- ಕರ್ನಾಟಕ ಸಿಇಟಿ ಪರಿಷ್ಕೃತ ರಾಂಕಿಂಗ್ 2022 ಪರದೆಯ ಮೇಲೆ ಪ್ರದರ್ಶನಗೊಳ್ಳಲಿದೆ.
- ಕರ್ನಾಟಕ ಸಿಇಟಿ ಪರಿಷ್ಕೃತ ರಾಂಕಿಂಗ್ 2022 ರ ಪ್ರಿಂಟ್ಔಟ್ ತೆಗೆದುಕೊಳ್ಳಿ.