ಬೆಂಗಳೂರು : ಕರಾವಳಿ, ಮಲೆನಾಡು ಸೇರಿದಂತೆ ರಾಜ್ಯಾದ್ಯಂತ ಇನ್ನೂ ಎರಡು ದಿನ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
BIGG NEWS : ಪದವಿ ಕಾಲೇಜು ವಿದ್ಯಾರ್ಥಿಗಳೇ ಗಮನಿಸಿ : ಇಂದಿನಿಂದ ಅ.9 ರವರೆಗೆ ಕಾಲೇಜುಳಿಗೆ ರಜೆ ಘೋಷಣೆ
ಕರಾವಳಿ ಜಿಲ್ಲೆಗಳು ಸೇರಿದಂತೆ ಮುಂದಿನ ಎರಡು ದಿನಗಳ ಕಾಲ 12 ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಅಕ್ಟೋಬರ್ 1 ಹಾಗೂ 2 ರಂದು ಬಾಗಲಕೋಟೆ, ಬೆಳಗಾವಿ, ಕಲಬುರಗಿ, ರಾಯಚೂರು, ವಿಜಯಪುರ ದಕ್ಷಿಣ ಒಳನಾಡಿನ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ರಾಮನಗರ, ತುಮಕೂರಿನಲ್ಲಿ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
BIG NEWS: ಇಂದಿನಿಂದ ಎಲ್ಲರಿಗೂ ಅನ್ವಯಿಸುವುದಿಲ್ಲ ಈ ಪಿಂಚಣಿ ಯೋಜನೆ… ಇಲ್ಲಿದೆ ಮಹತ್ವದ ಮಾಹಿತಿ | Pension Scheme
ಮುಂದಿನ 24 ಗಂಟೆಗಳಲ್ಲಿ ರಾಜ್ಯದ ಹಲವೆಡೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿಯ ಜಿಲ್ಲೆಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆ ಇದೆ. ಬೆಂಗಳೂರು ನಗರದಲ್ಲಿ ಸಾಮಾನ್ಯವಾಗಿ ಮೋಡಕವಿದ ವಾತಾವರಣವಿರಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.