ಮಂಗಳೂರು : ಸುರತ್ಕಲ್ ನ ಜಂಕ್ಷನ್ ಗೆ ವಿನಾಯಕ ದಾಮೋದರ್ ಸಾವರ್ಕರ್ ವೃತ್ತ ಎಂದು ನಾಮಕರಣ ಮಾಡುವ ನಗರ ಯೋಜನೆ ಮತ್ತು ಸುಧಾರಣಾ ಸ್ಥಾಯಿ ಸಮಿತಿಯ ಶಿಫಾರಸನ್ನು ಮಂಗಳೂರು ಮಹಾನಗರ ಪಾಲಿಕೆ ಕೌನ್ಸಿಲ್ (ಎಂಸಿಸಿ) ಅನುಮೋದಿಸಿದೆ.
BIG NEWS : ಇಂದು ಭಾರತೀಯ ರೈಲ್ವೇಯ ʻಹೊಸ ಆಲ್ ಇಂಡಿಯಾ ರೈಲ್ವೆ ವೇಳಾಪಟ್ಟಿʼ ಬಿಡುಗಡೆ !… ಇಲ್ಲಿದೆ ಸಂಪೂರ್ಣ ಮಾಹಿತಿ
ನೂತನವಾಗಿ ಆಯ್ಕೆಯಾದ ಮೇಯರ್ ಜಯಾನಂದ ಅಂಚನ್ ಸಭೆಯ ಅಧ್ಯಕ್ಷತೆ ವಹಿಸಿದ್ದರು. ಸಭೆಯ ನಡಾವಳಿಗಳನ್ನು ಮುಂದಿನ ಕೌನ್ಸಿಲ್ ಸಭೆಯಲ್ಲಿ ಅನುಮೋದಿಸಲಾಗುವುದು. ಅನುಮೋದನೆಗಾಗಿ ಸರ್ಕಾರಕ್ಕೆ ಪ್ರಸ್ತಾವನೆಯನ್ನು ಕಳುಹಿಸಲಾಗುವುದು.
BIGG NEWS : ನಾಡಗೀತೆ ವಿವಾದ : ಹೈಕೋರ್ಟ್ ನಿಂದ ರಾಜ್ಯ ಸರ್ಕಾರಕ್ಕೆ ನೋಟಿಸ್ ಜಾರಿ
ಮಂಗಳೂರು ನಗರ ಉತ್ತರ ಶಾಸಕ ಡಾ.ವೈ.ಭರತ್ ಶೆಟ್ಟಿ ಅವರು ಜಂಕ್ಷನ್ ಗೆ ಸಾವರ್ಕರ್ ಅವರ ಹೆಸರನ್ನು ಇಡುವ ಬಗ್ಗೆ ಮಂಗಳೂರು ಮಹಾನಗರ ಪಾಲಿಕೆ ಕೌನ್ಸಿಲ್ ಗೆ ಪ್ರಸ್ತಾವನೆ ಸಲ್ಲಿಸಿದ್ದರು. ಅಕ್ಟೋಬರ್ 30, 2021 ರಂದು ನಡೆದ ಕೌನ್ಸಿಲ್ ಸಭೆಯಲ್ಲಿ, ಈ ಪ್ರಸ್ತಾಪವನ್ನು ಸ್ಥಾಯಿ ಸಮಿತಿಗೆ ಕಳುಹಿಸಿತ್ತು.
ಫೆಬ್ರವರಿ 15 ರಂದು ಸ್ಥಾಯಿ ಸಮಿತಿ ಸದಸ್ಯರು ಸ್ಥಳಕ್ಕೆ ಭೇಟಿ ನೀಡಿದ್ದರು ಮತ್ತು ಜಂಕ್ಷನ್ ಗೆ ಸಾವರ್ಕರ್ ಅವರ ಹೆಸರನ್ನು ಇಡುವ ಬಗ್ಗೆ ಕೌನ್ಸಿಲ್ ಗೆ ಶಿಫಾರಸು ಮಾಡಲು ನಿರ್ಧರಿಸಿದ್ದರು.