ಬೆಂಗಳೂರು : ಅನಾರೋಗ್ಯದ ಕಾರಣದಿಂದ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದ ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದ್ದು, ಇಂದು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.
BIGG NEWS : ಕರ್ನಾಟಕದ 12 ಜಿಲ್ಲೆಗಳಲ್ಲಿ 2 ದಿನ ಭಾರೀ ಮಳೆ ಮುನ್ಸೂಚನೆ : ಹವಾಮಾನ ಇಲಾಖೆ ಎಚ್ಚರಿಕೆ
ಕಳೆದ ಭಾನುವಾರ ಎಸ್.ಎಂ.ಕೃಷ್ಣ ಅವರಿಗೆ ಉಸಿರಾಟದ ಸಮಸ್ಯೆಯಿಂದಾಗಿ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಪಡೆದ ಬಳಿಕ ಎಸ್.ಎಂ.ಕೃಷ್ಣ ಆರೋಗ್ಯದಲ್ಲಿ ಸುಧಾರಣೆಯಾಗಿದೆ ಎಂದು ವೈದ್ಯರು ತಿಳಿಸಿದ್ದು, ಅವರನ್ನು ಇಂದು ಎಸ್.ಎಂ.ಕೃಷ್ಣ ಅವರನ್ನು ಡಿಸ್ಚಾರ್ಜ್ ಮಾಡಲಾಗಿದ್ದು, ಸದಾಶಿವನಗರದ ನಿವಾಸಕ್ಕೆ ಆಗಮಿಸಿದ್ದಾರೆ.