ಶಿವಮೊಗ್ಗ : ಅಕ್ಟೋಬರ್ 02 ರಂದು ಗಾಂಧಿ ಜಯಂತಿ ಪ್ರಯುಕ್ತ ಪಾಲಿಕೆ ವ್ಯಾಪ್ತಿಯಲ್ಲಿ ಪ್ರಾಣಿ ವಧೆ ಹಾಗೂ ಮಾಂಸ ಮಾರಾಟ ನಿಷೇಧಿಸಲಾಗಿದ್ದು ಮಾಂಸ ಮಾರಾಟ ಉದ್ದಿಮೆದಾರರು ಅಂದು ಮಾರಾಟ ಬಂದ್ ಮಾಡಿ ಸಹಕರಿಸಲು ಕೋರಲಾಗಿದೆ.
ಈ ಆದೇಶವನ್ನು ಉಲ್ಲಂಘಿಸುವ ಅಂಗಡಿ ಮಾಲೀಕರ ಮೇಲೆ ಸೂಕ್ತ ಕಾನೂನು ಕ್ರಮ ವಹಿಸಲಾಗುವುದು ಎಂದು ಮಹಾನಗರಪಾಲಿಕೆ ಆಯುಕ್ತರು ತಿಳಿಸಿದ್ದಾರೆ.
ಒಂದು ದಿನದಲ್ಲಿ ಎಷ್ಟು ಕಾಫಿ ಕುಡಿಯಬೇಕು? ಸಂಶೋಧನೆ ಹೇಳುವುದೇನು ಗೊತ್ತಾ? ಇಲ್ಲಿದೆ ಮಾಹಿತಿ
ವಿದ್ಯಾರ್ಥಿ ವೇತನಕ್ಕಾಗಿ ಆನ್ಲೈನ್ ಅರ್ಜಿ ಆಹ್ವಾನ
ಭದ್ರಾವತಿ ಸಮಾಜ ಕಲ್ಯಾಣ ಇಲಾಖೆಯು 2022-23ನೇ ಸಾಲಿನ ಶೈಕ್ಷಣಿಕ ಸಾಲಿಗೆ ಪರಿಶಿಷ್ಟ ಜಾತಿ/ಪರಿಶಿಷ್ಟ ವರ್ಗದ ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನಕ್ಕಾಗಿ ರಾಜ್ಯ ವಿದ್ಯಾರ್ಥಿ ವೇತನ ಪೋರ್ಟಲ್ನಲ್ಲಿ ನವೀನ ಹಾಗೂ ನವೀಕರಣ ವಿದ್ಯಾರ್ಥಿಗಳಿಂದ SATS ID ಮುಖಾಂತರ ವಿದ್ಯಾರ್ಥಿ ವೇತನಕ್ಕೆ ಆನ್ಲೈನ್ ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತರು ಪೋಷಕರ ಮೊಬೈಲ್ ಸಂಖ್ಯೆ, ವಿದ್ಯಾರ್ಥಿಯ ಮತ್ತು ಪೋಷಕರ ಆಧಾರ್ ಸಂಖ್ಯೆ/ಇ.ಐ.ಡಿ. ಸಂಖ್ಯೆ, ಆದಾಯ ಪ್ರಮಾಣ ಪತ್ರ, ಆಧಾರ್ ಸಂಖ್ಯೆ ಲಿಂಕ್ ಆಗಿರುವ ರಾಷ್ಟ್ರೀಯಕೃತ ಬ್ಯಾಂಕ್ ಖಾತೆ ಪಾಸ್ ಪುಸ್ತಕ ಪ್ರತಿಗಳೊಂದಿಗೆ ಅರ್ಜಿ ಸಲ್ಲಿಸುವಂತೆ ಭದ್ರಾವತಿ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
BIGG NEWS: PAYCM ಟೀ-ಶರ್ಟ್ ಧರಿಸಿದ ಯುವಕನಿಗೆ ʼಪೊಲೀಸರಿಂದಲೇ ಥಳಿತʼ
ಹೆಚ್ಚಿನ ಮಾಹಿತಿಗಾಗಿ ಕಚೇರಿಯನ್ನು ಖುದ್ದಾಗಿ ಅಥವಾ ದೂ.ಸಂ.: 08282-263761 ನ್ನು ಸಂಪರ್ಕಿಸುವುದು.