ಕಾನ್ಪುರ (ಉತ್ತರ ಪ್ರದೇಶ): ಉತ್ತರ ಪ್ರದೇಶದ ಕಾನ್ಪುರದಲ್ಲಿ ಯಾತ್ರಾರ್ಥಿಗಳನ್ನು ಹೊತ್ತೊಯ್ಯುತ್ತಿದ್ದ ಟ್ರಾಕ್ಟರ್ ಟ್ರಾಲಿ ಪಲ್ಟಿಯಾದ ಪರಿಣಾಮ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಶನಿವಾರ 26 ಕ್ಕೆ ಏರಿದೆ.
ಕಾನ್ಪುರ ಜಿಲ್ಲೆಯ ಘಟಂಪುರ ಪ್ರದೇಶದಲ್ಲಿ ಶನಿವಾರ ತಡರಾತ್ರಿ ಈ ಘಟನೆ ನಡೆದಿದೆ. ಭಕ್ತರನ್ನು ಹೊತ್ತ ಟ್ರ್ಯಾಕ್ಟರ್ ಟ್ರಾಲಿ ಉನ್ನಾವೋದಿಂದ ಹಿಂತಿರುಗುತ್ತಿತ್ತು.
ಅಪಘಾತದ ನಂತರ ಪೊಲೀಸರು ಸ್ಥಳಕ್ಕೆ ಧಾವಿಸಿದ್ದು, ಸ್ಥಳೀಯರೊಂದಿಗೆ ರಕ್ಷಣಾ ಕಾರ್ಯಾಚರಣೆ ಆರಂಭಿಸಿದ್ದಾರೆ. ಗಾಯಾಳುಗಳನ್ನು ತಕ್ಷಣವೇ ಆರೋಗ್ಯ ಕೇಂದ್ರಕ್ಕೆ ದಾಖಲಿಸಲಾಗಿದೆ.
“ಒಟ್ಟು 26 ಜನರು ಸಾವನ್ನಪ್ಪಿದ್ದಾರೆ ಮತ್ತು ಇತರರು ಗಾಯಗೊಂಡಿದ್ದಾರೆ. ಯಾತ್ರಿಕರು ಫತೇಪುರದ ಚಂಡಿಕಾ ದೇವಿ ದೇವಸ್ಥಾನದಿಂದ ಹಿಂತಿರುಗುತ್ತಿದ್ದರು. ಗಾಯಗೊಂಡವರನ್ನು ಹಾಲೆಟ್ ಆಸ್ಪತ್ರೆಗೆ ಕಳುಹಿಸಲಾಗಿದೆ. ತನಿಖೆ ನಡೆಯುತ್ತಿದೆ. ರಕ್ಷಣಾ ಕಾರ್ಯ ಪೂರ್ಣಗೊಂಡಿದೆ” ಎಂದು ಕಾನ್ಪುರದ ಜಿಲ್ಲಾ ಮ್ಯಾಜಿಸ್ಟ್ರೇಟ್ ವಿಶಾಕ್ ಜಿ ಅಯ್ಯರ್ ಹೇಳಿದ್ದಾರೆ.
ವಿಷಯದ ಕುರಿತು ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗುತ್ತಿದೆ. ಏತನ್ಮಧ್ಯೆ, ಪ್ರಧಾನಿ ನರೇಂದ್ರ ಮೋದಿ ಅವರು ಮೃತರ ಕುಟುಂಬಕ್ಕೆ 2 ಲಕ್ಷ ರೂಪಾಯಿ ಪರಿಹಾರವನ್ನು ಘೋಷಿಸಿದ್ದು, ಗಾಯಗೊಂಡವರಿಗೆ 50,000 ರೂಪಾಯಿಗಳನ್ನು ನೀಡಲಾಗುವುದು ಎಂದು ಪ್ರಧಾನ ಮಂತ್ರಿ ಕಚೇರಿ (PMO) ತಿಳಿಸಿದೆ.
BIGG NEWS : ಭಾರತದ ‘ನಿರುದ್ಯೋಗ ದರ’ ಸೆಪ್ಟೆಂಬರ್’ನಲ್ಲಿ ಶೇ.6.43ಕ್ಕೆ ಇಳಿಕೆ ; ಸಿಎಂಐಇ