ಬೆಂಗಳೂರು : ಮೀಸಲಾತಿ ಹೆಚ್ಚಳದ ನಿರೀಕ್ಷೆಯಲ್ಲಿರುವ ಎಸ್ ಸಿ/ಎಸ್ ಟಿ ಸಮುದಾಯಕ್ಕೆ ಸಿಎಂ ಬೊಮ್ಮಾಯಿ ಸಿಹಿಸುದ್ದಿ ನೀಡಿದ್ದು, ಎಸ್ ಸಿ/ಎಸ್ ಟಿ ಮೀಸಲಾತಿ ಹೆಚ್ಚಳ ವಿಚಾರವಾಗಿ ಚರ್ಚೆ ನಡೆಸಲು ಸಿಎಂ ಬಸವರಾಜ ಬೊಮ್ಮಾಯಿ ಅಕ್ಟೋಬರ್ 7ಕ್ಕೆ ಸರ್ವಪಕ್ಷ ಸಭೆ ಕರೆದಿದ್ದಾರೆ.
BIGG NEWS : `ಚರ್ಮಗಂಟು’ ರೋಗದಿಂದ ಜಾನುವಾರು ಸತ್ತರೆ ಮಾಲೀಕರಿಗೆ ಪರಿಹಾರ : ರಾಜ್ಯ ಸರ್ಕಾರದಿಂದ ಆದೇಶ
ಗೃಹ ಕಚೇರಿ ಕೃಷ್ಣಾದಲ್ಲಿ ಅ,7 ರ ಬೆಳಗ್ಗೆ 11.30 ಕ್ಕೆ ಸರ್ವಪಕ್ಷ ಸಭೆ ನಿಗದಿಯಾಗಿದೆ. ವಿಧಾನಮಂಡಲದ ಉಭಯ ಸದನಗಳ ನಾಯಕರನ್ನು ಸಭೆಗೆ ಆಹ್ವಾನಿಸಲಾಗಿದ್ದು, ಮೀಸಲಾತಿಗೆ ಸಂಬಂಧಿಸಿದಂತೆ ರಚಿಸಿದ್ದ ನ್ಯಾ. ನಾಗಮೋಹನ್ ದಾಸ್ ಸಮಿತಿಯು ನೀಡಿರುವ ವರದಿ ಕುರಿತು ಚರ್ಚೆ ನಡೆಸಲಾಗುತ್ತದೆ.
ನಾಗಮೋಹನ್ ದಾಸ್ ನೇತೃತ್ವದ ಸಮಿತಿ ವರದಿ ಸಲ್ಲಿಸಿದ್ದು, ಅದರನ್ವಯ ಎಸ್ ಸಿ ಗೆ ಶೇ.15-17 ಮತ್ತು ಎಸ್ ಟಿ ಗೆ ಶೇ. 7 ರಷ್ಟು ಮೀಸಲಾತಿ ಪರಿಗಣಿಸಬೇಕು ಎಂದು ತಿಳಿಸಲಾಗಿದೆ.