ಕಾನ್ಪುರ: ಉತ್ತರ ಪ್ರದೇಶದ ಕಾನ್ಪುರದಲ್ಲಿ ನಿನ್ನೆ ರಾತ್ರಿ ಸಂಭವಿಸಿದ ಎರಡು ಪ್ರತ್ಯೇಕ ಅಪಘಾತಗಳಲ್ಲಿ ಸುಮಾರು 31 ಜನರು ಸಾವನ್ನಪ್ಪಿದ್ದು, 27 ಮಂದಿ ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಮೊದಲ ಘಟನೆಯಲ್ಲಿ, ಸುಮಾರು 50 ಯಾತ್ರಾರ್ಥಿಗಳನ್ನು ಹೊತ್ತೊಯ್ಯುತ್ತಿದ್ದ ಟ್ರ್ಯಾಕ್ಟರ್ ಟ್ರಾಲಿಯು ಘಟಂಪುರ ಪ್ರದೇಶದ ಬಳಿ ಕೊಳಕ್ಕೆ ಉರುಳಿ ಬಿದ್ದ ಪರಿಣಾಮ ಮಹಿಳೆಯರು ಮತ್ತು ಮಕ್ಕಳು ಸೇರಿ 26 ಮಂದಿ ಸಾವನ್ನಪ್ಪಿದ್ದು, 20 ಮಂದಿ ತೀವ್ರವಾಗಿ ಗಾಯಗೊಂಡಿದ್ದಾರೆ.
ಟ್ರ್ಯಾಕ್ಟರ್ ಉನ್ನಾವೋದ ಚಂದ್ರಿಕಾ ದೇವಿ ದೇವಸ್ಥಾನದಿಂದ ಹಿಂತಿರುಗುತ್ತಿದ್ದಾಗ ದುರಂತ ಸಂಭವಿಸಿದೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.
ಈ ಘಟನೆ ನಡೆದ ಕೆಲವೇ ಗಂಟೆಗಳಲ್ಲಿ ನಗರದಲ್ಲಿ ಸಂಭವಿಸಿದ ಎರಡನೇ ರಸ್ತೆ ಅಪಘಾತ ಸಂಭವಿಸಿದೆ. ಅಹಿರ್ವಾನ್ ಫ್ಲೈಓವರ್ ಬಳಿ ವೇಗವಾಗಿ ಬಂದ ಟ್ರಕ್ ಲೋಡರ್ ಟೆಂಪೋಗೆ ಡಿಕ್ಕಿ ಹೊಡೆದ ಪರಿಣಾಮ ಐವರು ಸಾವನ್ನಪ್ಪಿದ್ದಾರೆ ಮತ್ತು ಏಳು ಮಂದಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ರೈಲ್ವೆ ನಿಲ್ದಾಣದಲ್ಲೇ ಇದ್ದಕ್ಕಿದ್ದಂತೆ ಹೃದಯಾಘಾತ: ಪತಿಯ ಬಾಯಿಗೆ ಉಸಿರು ತುಂಬಿ ಮರು ಜೀವ ನೀಡಿದ ಪತ್ನಿ!
BIGG NEWS : ಪಾಲಿಟೆಕ್ನಿಕ್ ಕಾಲೇಜುಗಳ ಬೋಧಕ ಹಾಗೂ ಬೋಧಕೇತರ ಸಿಬ್ಬಂದಿಗೆ ಬಯೋಮೆಟ್ರಿಕ್ ಹಾಜರಾತಿ ಕಡ್ಡಾಯ