ಬೆಂಗಳೂರು : ರಾಜ್ಯ ಬಿಜೆಪಿ ಸರ್ಕಾರ ಅತ್ಯಂತ ಭ್ರಷ್ಟ ಸರ್ಕಾರ ಎಂಬ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿಕೆಗೆ ಸಿಎಂ ಬಸವರಾಜ ಬೊಮ್ಮಾಯಿ ತಿರುಗೇಟು ನೀಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಡೀ ಕಾಂಗ್ರೆಸ್ ಪಕ್ಷವೇ ಬೇಲ್ ನಲ್ಲಿದೆ. ಗಾಂಧಿ ಜಯಂತಿ ದಿನ ನಕಲಿ ಗಾಂಧಿಗಳ ಬಗ್ಗೆ ಮಾತನಾಡಲ್ಲ. ರಾಹುಲ್ ಗಾಂಧಿ, ಸೋನಿಯಾಗಾಂಧಿ, ಡಿ.ಕೆ. ಶಿವಕುಮಾರ್ ಬೇಲ್ ನಲ್ಲಿದ್ದಾರ. ಕಾಂಗ್ರೆಸ್ ಹೈಕಮಾಂಡ್ ಗೆ ಕರ್ನಾಟಕ ಎಟಿಎಂ ಆಗಿತ್ತು ಎಂದು ತಿರುಗೇಟು ನೀಡಿದ್ದಾರೆ.
ಕಾಂಗ್ರೆಸ್ ನ 40 ಪರ್ಸೆಂಟ್ ಆರೋಪಕ್ಕೆ ನಿಮ್ಮ ಬಳಿ ದಾಖಲೆ ಇದ್ದರೆ ಕೊಡಿ, ದಾಖಲೆ ಕೊಟ್ಟರೆ ತನಿಖೆ ಮಾಡುತ್ತೇವೆ.ದಾಖಲೆ ನೀಡದೇ ಆರೋಪ ಮಾಡುವುದು ಸರಿಯಲ್ಲ ಎಂದರು.