ದಾವಣಗೆರೆ : ಅಹಿಂಸಾತ್ಮಕ ಹೋರಾಟದ ಮೂಲಕ ದೇಶಕ್ಕೆ ಸ್ವಾತಂತ್ರ್ಯವನ್ನು ತಂದು ಕೊಟ್ಟ ಮಹಾನ್ ಚೇತನ ರಾಷ್ಟ್ರಪಿತ ಮಹಾತ್ಮ ಗಾಂಧಿಯವರು ಎಂದು ನಗರಾಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಬಿ.ಎ ಬಸವರಾಜ್ (ಬೈರತಿ) ಹೇಳಿದರು.
ಇಂದು ನಗರದ ಶ್ರೀರಾಮನಗರದ ಗಾಂಧಿ ಭವನದಲ್ಲಿ ಜಿಲ್ಲಾಡಳಿತದ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಹಾಗೂ ಮಾಜಿ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಜನ್ಮದಿನಾಚರಣೆಯನ್ನು ಚರಕ ನೆಯುವ ಮೂಲಕ ಹಾಗೂ ಇಬ್ಬರು ಮಹಾನಿಯರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸುವ ಮೂಲಕ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ದೇಶದ ಸ್ವಾತಂತ್ರ್ಯಕ್ಕಾಗಿ ಅನೇಕ ಚಳುವಳಿ ಹಾಗೂ ಹೋರಾಟಗಳನ್ನು ರೂಪಿಸಿ ಅಹಿಂಸಾ ಮಾರ್ಗದ ಮೂಲಕ ಸ್ವಾತಂತ್ರ್ಯ ಚಳುವಳಿಯನ್ನು ಮುನ್ನಡೆಸಿದರು. ಪ್ರಸ್ತುತ ದಿನಮಾನಗಳಲ್ಲಿ ಮಹಾತ್ಮ ಗಾಂಧಿಯವರ ತತ್ವ ಆದರ್ಶಗಳನ್ನು ಅಳವಡಿಸಿಕೊಳ್ಳುವ ಮೂಲಕ ಅವರ ಹಾದಿಯಲ್ಲಿ ಸಾಗೋಣ ಎಂದರು.