ಚನ್ನಪಟ್ಟಣ : ಚನ್ನಪಟ್ಟಣ ತಾಲೂಕಿನ ಬೈರಾಪಟ್ಟಣದಲ್ಲಿ ಮಾಜಿ ಸಚಿವ ಸಿ.ಪಿ. ಯೋಗೇಶ್ವರ್ ಕಾರಿನ ಮೇಲೆ ಜೆಡಿಎಸ್ ಕಾರ್ಯಕರ್ತರು ಕಲ್ಲು ಹಾಗೂ ಮೊಟ್ಟೆ ಎಸೆದಿರುವ ಘಟನೆಗೆ ಸಂಬಂಧಿಸಿದಂತೆ ಜೆಡಿಎಸ್ ನ 14 ಮಂದಿ ಕಾರ್ಯಕರ್ತರ ವಿರುದ್ಧ ಎಫ್ ಐ ಆರ್ ದಾಖಲಾಗಿದೆ. ಚನ್ನಪಟ್ಟಣ ಗ್ರಾಮಾಂತರ ಠಾಣೆಯಲ್ಲಿ ಎಫ್ ಐ ಆರ್ ದಾಖಲಾಗಿದೆ.
ಚನ್ನಪಟ್ಟಣದಲ್ಲಿ ರಸ್ತೆ ಅಭಿವೃದ್ಧಿ ಕಾಮಗಾರಿ ಭೂಮಿ ಪೂಜೆ ವೇಳೆ ಜೆಡಿಎಸ್ ಕಾರ್ಯಕರ್ತರು ಹಾಗೂ ಬಿಜೆಪಿ ಕಾರ್ಯಕರ್ತರ ನಡುವೆ ವಾಕ್ಸಮರ ನಡೆದಿತ್ತು. ಆಹ್ವಾನ ಪತ್ರಿಕೆಯಲ್ಲಿ ಸ್ಥಳೀಯ ಶಾಸಕರನ್ನು ಕಡೆಗಣಿಸಿದ್ದಾರೆ ಎಂದು ಜೆಡಿಎಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದರು. ಈ ವೇಳೆ ಸಿ.ಪಿ ಯೋಗೇಶ್ವರ ಕಾರು ಬರುತ್ತಿದಂತೆ ಮುತ್ತಿಗೆ ಹಾಕಿ ಕಪ್ಪು ಪಟ್ಟಿ ಪ್ರದರ್ಶನಕ್ಕೆ ಜೆಡಿಎಸ್ ಕಾರ್ಯಕರ್ತರು ಮುಂದಾಗಿದ್ದರು.. ಚನ್ನಪಟ್ಟಣದಲ್ಲಿ ಭೂಮಿ ಪೂಜೆ ವೇಳೆ ಜೆಡಿಎಸ್ ಕಾರ್ಯಕರ್ತರು ಗಲಾಟೆ ಮಾಡಿದ್ದಾರೆ. ರಸ್ತೆ ಅಭಿವೃದ್ಧಿ ಕಾಮಗಾರಿ ಶಂಕುಸ್ಥಾಪನೆ ಆಹ್ವಾನ ಪತ್ರಿಕೆಯಲ್ಲಿ ಸ್ಥಳೀಯ ಶಾಸಕರನ್ನು ಕಡೆಗಣಿಸಿದ್ದು ಯಾಕೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದರು.
ನಂತರ ಮಾಜಿ ಸಚಿವ ಸಿ.ಪಿ.ಯೋಗೇಶ್ವರ್ ಕಾರಿನ ಮೇಲೆ ಜೆಡಿಎಸ್ ಕಾರ್ಯಕರ್ತರು ಕಲ್ಲು ಹಾಗೂ ಮೊಟ್ಟೆ ಎಸೆದಿದ್ದರು.. ಯೋಗೇಶ್ವರ್ ಕಾರಿನ ಮೇಲೆ ಕಲ್ಲು ಹಾಗೂ ಮೊಟ್ಟೆ ಎಸೆದ ಹಿನ್ನೆಲೆಯಲ್ಲಿ ಜೆಡಿಎಸ್ ಕಾರ್ಯಕರ್ತರ ಮೇಲೆ ಪೊಲೀಸರು ಲಾಠಿ ಚಾರ್ಜ್ ನಡೆಸಿದ್ದರು. ಇದೀಗ ಈ ಘಟನೆಗೆ ಸಂಬಂಧಿಸಿದಂತೆ ಜೆಡಿಎಸ್ ನ 14 ಮಂದಿ ವಿರುದ್ಧ ದೂರು ದಾಖಲಾಗಿದೆ.
ಜೆಡಿಎಸ್ನ 14 ಕಾರ್ಯಕರ್ತರ ವಿರುದ್ಧ ಚನ್ನಪಟ್ಟಣ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಿಸಲಾಗಿದೆ. ಬಿಜೆಪಿ ನಾಯಕ ಸಿ.ಪಿ.ಯೋಗೇಶ್ವರ ಅವರ ಕಾರು ಚಾಲಕ ವೆಂಕಟೇಶ್ ನೀಡಿದ್ದ ದೂರು ಆಧರಿಸಿ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ.
ಅಹಿಂಸಾತ್ಮಕ ಹೋರಾಟದದಿಂದಲೇ ದೇಶಕ್ಕೆ ಸ್ವಾತಂತ್ರ್ಯ ತಂದ ಮಹಾನ್ ಚೇತನ ಗಾಂಧೀಜಿ ; ಸಚಿವ ಭೈರತಿ ಬಸವರಾಜ