ಉತ್ತರ ಪ್ರದೇಶ: ಉತ್ತರ ಪ್ರದೇಶದ ಭದೋಹಿ ಜಿಲ್ಲೆಯ ಔರಾಯ್ ಪಟ್ಟಣದ ದುರ್ಗಾಪೂಜಾ ದುರ್ಗಾಪೂಜಾ ಪೆಂಡಾಲ್ನಲ್ಲಿ ಸಂಭವಿಸಿದ ಬೆಂಕಿ ಅವಘಡದಲ್ಲಿ 12 ವರ್ಷದ ಬಾಲಕ ಸಾವನ್ನಪ್ಪಿದ್ದು, ಸುಮಾರು 52 ಜನರು ಗಾಯಗೊಂಡಿದ್ದಾರೆ. ಅವರಲ್ಲಿ 22 ಜನರ ಸ್ಥತಿ ಗಂಭೀರವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಭಾನುವಾರ ರಾತ್ರಿ 9:30ರ ಸುಮಾರಿಗೆ ದುರ್ಗಾ ಪೂಜೆ ವೇಳೆ ಆರತಿ ಮಾಡುವಾಗ ಈ ಘಟನೆ ನಡೆದಿದೆ. ಪೆಂಡಾಲ್ ಒಳಗೆ ಸುಮಾರು 150 ಜನರಿದ್ದರು. ಸುದ್ದಿ ತಿಳಿಯುತ್ತಿದ್ದಂತೇ ಘಟನಾ ಸ್ಥಳಕ್ಕೆ ಅಗ್ನಿಶಾಮಕ ಇಲಾಖೆ ಸಿಬ್ಬಂದಿಗಳು ಧಾವಿಸಿ ಗಾಯಾಳುಗಳನ್ನು ವಾರಣಾಸಿಯ ಬನಾರಸ್ ಹಿಂದೂ ವಿಶ್ವವಿದ್ಯಾಲಯದ (ಬಿಎಚ್ಯು) ಟ್ರಾಮಾ ಸೆಂಟರ್ಗೆ ದಾಖಲಿಸಲಾಗಿದೆ. ಅವರಲ್ಲಿ ಕೆಲವರ ಸ್ಥಿತಿ ಚಿಂತಾಜನಕವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
BIGG NEWS : ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ಸಿಹಿಸುದ್ದಿ : ದಸರಾ ಬಳಿಕ ರಾಜ್ಯ ಸಚಿವ ಸಂಪುಟ ವಿಸ್ತರಣೆ?