ಕಲಬುರ್ಗಿ: ಮೂರು ಜಿಲ್ಲೆಯ ವಿವಿಧ ಠಾಣೆಗಳಲ್ಲಿ ಹಲವು ಪ್ರಕರಣಗಳು ಎದುರಿಸುತ್ತಿರುವ ಬಿಜೆಪಿ ಮುಖಂಡ ಮಣಿಕಂಠ ರಾಠೋಡ ಅವರನ್ನು ಒಂದು ವರ್ಷ ಕಾಲ ಗಡಿಪಾರು ಮಾಡಲಾಗಿದೆ.
BREAKING NEWS : ರಾಜ್ಯಸಭೆ ಚುನಾವಣೆಯಲ್ಲಿ ಅಡ್ಡಮತದಾನ ಆರೋಪ : ಜೆಡಿಎಸ್ ನ ಇಬ್ಬರು ಶಾಸಕರಿಗೆ ನೋಟಿಸ್ ಜಾರಿ
ಯಾದಗಿರಿ, ವಿಜಯಪುರ, ಕಲಬುರಗಿ ಮೂರು ಜಿಲ್ಲೆಯ ಅವರು ಗಡಿಪಾರು ಮಾಡವಂತೆ ನಗರ ಪೊಲೀಸ್ ಆಯುಕ್ತ ಡಾ.ವೈ.ಎಸ್ ರವಿಕುಮಾರ ಆದೇಶ ಹೊರಡಿಸಿದ್ದಾರೆ.
ಅಕ್ರಮ ಪಡಿತರ ಅಕ್ಕಿ ಸಾಗಣೆ, ಜೀವ ಬೆದರಿಕೆ ಹಾಕಿರುವುದು ಸೇರಿದಂತೆ ಮೂರು ಜಿಲ್ಲೆಗಳ ಹಲವಡೆ ವಿವಿಧ ಪ್ರಕರಣಗಳನ್ನು ಮಣಿಕಂಠ ರಾಠೋಡ ಎದುರಿಸುತ್ತಿದ್ದಾರೆ. ಕೋರ್ಟ್ನಲ್ಲಿ ಜಾಮೀನು ಪಡೆದು ಹೊರಬಂದ ನಂತರವು ಮತ್ತೆ ಹಳೆ ಚಾಳಿ ಮುಂದುವರೆಸಿದ್ದರು. ಇವರನ್ನು ಗಡಿಪಾರು ಮಾಡಬೇಕೆಂದು ಹಲವು ದಿನಗಳಿಂದ ಸಂಘಟನೆಗಳು ಆಗ್ರಹಿಸಿದ್ದವು.
BREAKING NEWS : ರಾಜ್ಯಸಭೆ ಚುನಾವಣೆಯಲ್ಲಿ ಅಡ್ಡಮತದಾನ ಆರೋಪ : ಜೆಡಿಎಸ್ ನ ಇಬ್ಬರು ಶಾಸಕರಿಗೆ ನೋಟಿಸ್ ಜಾರಿ
ಇತ್ತೀಚೆಗೆ ಎಡಿಜಿಪಿ ಅಲೋಕ್ ಕುಮಾರ್ ಕಲಬುರಗಿ ನಗರಕ್ಕೆ ಆಗಮಿಸಿದಾಗ ದಲಿತ ಸಂಘಟನೆ ಮುಖಂಡರು ಮಣಿಕಂಠ ರಾಠೋಡ ಗಡಿಪಾರಿಗೆ ಒತ್ತಾಯಿಸಿ ಮನವಿ ಸಲ್ಲಿಸಿದ್ದರು. ಈ ಹಿನ್ನೆಲೆಯಲ್ಲಿ ಕಲಬುರಗಿಯಿಂದ ಶಿವಮೊಗ್ಗ ಗ್ರಾಮಾಂತರ ವ್ಯಾಪ್ತಿಗೆ ಒಂದು ವರ್ಷ ಕಾಲ ಗಡಿಪಾರು ಮಾಡಲಾಗಿದೆ. ಸೆ.30 ರಂದು ಆದೇಶ ಹೊರಬಿದ್ದಿದ್ದು, ಗಡಿಪಾರಿಗೆ ಐದು ದಿನ ಕಾಲಾವಕಾಶ ನೀಡಲಾಗಿದೆ.