ಬೆಂಗಳೂರು: 15 ಸಾವಿರ ಪದವೀಧರ ಪ್ರಾಥಮಿಕ ಶಿಕ್ಷಕರ ನೇಮಕಾತಿಗೆ ( Recruitment of Graduate Primary Teachers ) ಸಂಬಂಧಿಸಿದಂತೆ 1:2 ಪರಿಶೀಲನಾ ಪಟ್ಟಿಯಲ್ಲಿನ ಅಭ್ಯರ್ಥಿಗಳು ಮೂಲದಾಖಲೆಗಳ ಪರಿಶೀಲನೆಗೆ ( Document Verification ) ನಿಗದಿತ ದಿನಾಂಕದೊಳಗೆ ಹಾಜರಾಗುವಂತೆ ಸಾರ್ವಜನಿಕ ಶಿಕ್ಷಣ ಇಲಾಖೆ ( School Education Department ) ಸೂಚಿಸಿದೆ.
ಈ ಕುರಿತು ಸಾರ್ವಜನಿಕ ಶಿಕ್ಷಣ ಇಲಾಖೆಯ ವಿಶೇಷಾಧಿಕಾರಿ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿದ್ದು, ಪದವೀಧರ ಪ್ರಾಥಮಿಕ ಶಿಕ್ಷಕರ ನೇಮಕಾತಿ-2022( Teacher Recruitment 2022)ಕ್ಕೆ ಸಂಬಂಧಿಸಿದಂತೆ 1:2 ಪರಿಶೀಲನಾ ಪಟ್ಟಿಯನ್ನು ಇಲಾಖಾ ವೆಬ್ ಸೈಟ್ ನಲ್ಲಿ ( Website ) ಪ್ರಕಟಿಸಲಾಗಿದೆ ಎಂದಿದ್ದಾರೆ.
ಪ್ರಕಟಿತ ಪಟ್ಟಿಗಳಲ್ಲಿ ಪರಿಗಣಿಸಲ್ಪಟ್ಟಿರುವ ಅಭ್ಯರ್ಥಿಗಳ ಮೂಲದಾಖಲೆಗಳ ಪರಿಶೀಲನೆಯನ್ನು ಆಯಾ ಜಿಲ್ಲೆಯ ಉಪನಿರ್ದೇಶಕರು(ಆಡಳಿತ) ಹಾಗೂ ನೇಮಕಾತಿ ಪ್ರಾಧಿಕಾರದವರ ಕಚೇರಿಗಳಲ್ಲಿ ದಿನಾಂಕ 06-10-2022ರಿಂದ ನಡೆಸಲಾಗುತ್ತಿದೆ ಎಂದು ಮಾಹಿತಿ ನೀಡಿದ್ದಾರೆ.
ಅಭ್ಯರ್ಥಿಗಳು ಇಲಾಖೆಯಿಂದ ಸೂಚಿಸಿರುವಂತ ಸೂಚನೆಗಳನ್ನು ಪಾಲಿಸಿ, ಮೂಲದಾಖಲೆಗಳ ಪರಿಶೀಲನೆಗೆ ಹಾಜರಾಗುವುದು. ಹೆಚ್ಚಿನ ಮಾಹಿತಿಗಾಗಿ ಇಲಾಖಾ ವೆಬ್ ಸೈಟ್ http://schooleducation.kar.nic.in ತಾಣಕ್ಕೆ ಭೇಟಿ ನೀಡುವಂತೆ ತಿಳಿಸಿದ್ದಾರೆ.