ಬೆಂಗಳೂರು : ತೀವ್ರ ವಿವಾದಕ್ಕೆ ಕಾರಣವಾಗಿದ್ದ ಹೊನ್ನಾವರದ ಪರೇಶ್ ಮೆಸ್ತಾ ಸಾವು ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದ್ದು, ಪರೇಶ್ ಮೇಸ್ತಾನದ್ದು ಕೊಲೆಯಲ್ಲ, ಆಕಸ್ಮಿಕ ಸಾವು ಎಂದು ಹೊನ್ನಾವರದ ನ್ಯಾಯಾಲಯಕ್ಕೆ ಸಿಬಿಐ ವರದಿ ಸಲ್ಲಿಸಿದೆ.
BIGG NEWS: ಬಿಬಿಎಂಪಿ ಮುಖ್ಯ ಆಯುಕ್ತರ ತುಷಾರ್ ಗಿರಿನಾಥ್ ಫೋಟೋ ದುರ್ಬಳಕೆ; ದೂರು ದಾಖಲು
ಈ ಕುರಿತು ಟ್ವೀಟ್ ಮಾಡಿರುವ ಸಿದ್ದರಾಮಯ್ಯ,ಹೊನ್ನಾವರದ ಪರೇಶ್ ಮೇಸ್ತನದ್ದು ಹತ್ಯೆ ಅಲ್ಲ, ಆಕಸ್ಮಿಕ ಸಾವು ಎಂಬ ಸಿಬಿಐನ ವಿಚಾರಣಾ ವರದಿ ರಾಜ್ಯ ಬಿಜೆಪಿಯ ಮುಖಕ್ಕೆ ಬಡಿದ ತಪರಾಕಿ. ಬಿಜೆಪಿ ಅವರಿಗೆ ಮಾನ-ಮರ್ಯಾದೆ ಇದ್ದರೆ ನಮ್ಮ ಮೇಲೆ ಮಾಡಿದ್ದ ಸುಳ್ಳು ಆರೋಪಕ್ಕಾಗಿ ಕ್ಷಮೆ ಕೋರಬೇಕು ಎಂದು ಆಗ್ರಹಿಸಿದ್ದಾರೆ.
ಹೊನ್ನಾವರದ ಪರೇಶ್ ಮೇಸ್ತನದ್ದು ಹತ್ಯೆ ಅಲ್ಲ, ಆಕಸ್ಮಿಕ ಸಾವು ಎಂಬ ಸಿಬಿಐನ ವಿಚಾರಣಾ ವರದಿ ರಾಜ್ಯ @BJP4Karnataka ಮುಖಕ್ಕೆ ಬಡಿದ ತಪರಾಕಿ. ಬಿಜೆಪಿಗೆ ಮಾನ-ಮರ್ಯಾದೆ ಇದ್ದರೆ ನಮ್ಮ ಮೇಲೆ ಮಾಡಿದ್ದ ಸುಳ್ಳು ಆರೋಪಕ್ಕಾಗಿ ಕ್ಷಮೆ ಕೋರಬೇಕು. 1/2#PareshMesta pic.twitter.com/gChNsPEQN5
— Siddaramaiah (@siddaramaiah) October 3, 2022
ಬಿಜೆಪಿ ಗೆದ್ದಿರುವ ಪ್ರತಿಯೊಂದು ಸ್ಥಾನದ ಹಿಂದೆ ಪರೇಶ್ ಮೇಸ್ತನಂತಹ ಅಮಾಯಕ ಯುವಕರ ರಕ್ತ ಇದೆ. ಬಿಜೆಪಿ ನಾಯಕರೇ, ನೀವು ಅನುಭವಿಸುತ್ತಿರುವ ಅಧಿಕಾರದ ಕುರ್ಚಿಗೆ ಮೇಸ್ತಾನಂತಹ ಯುವಕರ ರಕ್ತದ ಕಲೆ ಅಂಟಿಕೊಂಡಿದೆ ಎಂದಿದ್ದಾರೆ.