ಉಡುಪಿ : ನೂರಕ್ಕೆ ನೂರರಷ್ಟು ಪರೇಶ್ ಮೇಸ್ತ ಕೊಲೆಯಾಗಿದೆ ಎಂದು ಉಡುಪಿಯಲ್ಲಿ ಶ್ರೀರಾಮ ಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಹೇಳಿದ್ದಾರೆ.
ಈ ಕುರಿತು ಉಡುಪಿಯಲ್ಲಿ ಪ್ರತಿಕ್ರಿಯೆ ನೀಡಿರುವ ಅವರು 2017 ರಲ್ಲಿ ಹೊನ್ನಾವರದಲ್ಲಿ ಕೊಲೆಯಾಗಿತ್ತು, 3 ವರ್ಷದ ನಂತರ ಸಿಬಿಐ ದಾಖಲೆ ಕಲೆಹಾಕಿದೆ. ಅಂದಿನ ಕಾಂಗ್ರೆಸ್ ಸರ್ಕಾರ ಪ್ರಕರಣ ಸಂಬಂಧ ಸಾಕ್ಷಿನಾಶ ಮಾಡಿತ್ತು. ಸಿಬಿಐ ಸಲ್ಲಿಸಿರುವ ವರದಿಯಿಂದ ಮೇಸ್ತ ಕುಟುಂಬಕ್ಕೆ ಅನ್ಯಾಯ ಆಗಿದೆ, ನೂರಕ್ಕೆ ನೂರರಷ್ಟು ಪರೇಶ್ ಮೇಸ್ತ ಕೊಲೆಯಾಗಿದೆ ಎಂದು ಉಡುಪಿಯಲ್ಲಿ ಶ್ರೀರಾಮ ಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಹೇಳಿದ್ದಾರೆ.
ಇನ್ನೂ, ಹೊನ್ನಾವರದಲ್ಲಿ ಪರೇಶ್ ಮೇಸ್ತ ಸಾವಿಗೆ ಬಿಗ್ ಟ್ವಿಸ್ಟ್ ಸಿಕ್ಕಿದ್ದು, ಸಿಬಿಐ ವರದಿಯಲ್ಲಿ ಸ್ಪೋಟಕ ಮಾಹಿತಿ ಬಹಿರಂಗಪಡಿಸಿದೆ. ಇದಕ್ಕೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಪ್ರತಿಕ್ರಿಯೆ ನೀಡಿದ್ದಾರೆ.
ಮೇಸ್ತ ಚಿಕ್ಕ ಹುಡುಗ ಆಕಸ್ಮಿಕವಾಗಿ ಸಾವನ್ನಪ್ಪಲು ಸಾಧ್ಯವಿಲ್ಲ. ಪರೇಶ್ ಮೇಸ್ತ ತನಿಖೆ ಬಗ್ಗೆ ಸಂಪೂರ್ಣ ಮಾಹಿತಿ ಇಲ್ಲ.ನಾನು ಅದರ ಬಗ್ಗೆ ಸಂಪೂರ್ಣ ಮಾಹಿತಿ ಪಡೆಯುತ್ತೇನೆ ಎಂದು ಹೇಳಿದ್ದಾರೆಸಿದ್ದರಾಮಯ್ಯ ಹೇಳಿಕೆ ವಿಚಾರವಾಗಿ ಮಾತನಾಡಿದ ಅವರು, ಸಿದ್ದರಾಮಯ್ಯ ಯಾವಾಗ ಏನು ಹೇಳ್ತಾರೆ ಗೊತ್ತಿಲ್ಲ. ರಕ್ತದ ಕಲೆ ಆಂಟಿರುವುದು ಅವರ ಕೈಗೆ ಎಂದು ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಸಿದ್ದರಾಮಯ್ಯ ಸರ್ಕಾರ ಅವಧಿಯಲ್ಲಿ ಟಿಪ್ಪು ಜಯಂತಿ ನಡೆದಿತ್ತು. ಟಿಪ್ಪು ಜಯಂತಿ ಮಾಡಿ ಗಲಭೆ ಮಾಡಿದರವರು. ಹಿಂದೂ ಕಾರ್ಯರ್ತರ ಕೊಲೆಗೆ ಅವರ ನಿರ್ಧಾರವೇ ಕಾರಣ ಎಂದು ಆರೋಪಿಸಿದ್ದಾರೆ.
ಪ್ರಕರಣದ ಹಿನ್ನಲೆ:
2017ರ ಡಿಸೆಂಬರ್ 6ರಂದು ಹೊನ್ನಾವರದ ಮೀನುಗಾರ ಪರಮೇಶ್ ಮೇಸ್ತ ನಾಪತ್ತೆಯಾಗಿದ್ದ. ಇದಲ್ಲದೆ, ಡಿಸೆಂಬರ್ 8 ರಂದು ಹೊನ್ನಾವರ ನಗರದ ಶನಿ ದೇವಾಸ್ಥಾನದ ಹಿಂಭಾಗದ ಹಟ್ಟಿ ಕೆರೆಯಲ್ಲಿ ಶವ ಪತ್ತೆಯಾಗಿತ್ತು. ಇದು ಪಟ್ಟಣದಲ್ಲಿ ಉದ್ವಿಗ್ನ ವಾತಾವರಣವನ್ನು ಸೃಷ್ಟಿಸಿತು. 2017 ಡಿಸೆಂಬರ್ 11 ರಂದು ಮೇಸ್ತಾ ಅವರನ್ನು ಕೊಲ್ಲಲಾಯಿತು ಎಂಬ ಆರೋಪ ಕೇಳಿಬಂತು. ಕಾರವಾರ, ಹೊನ್ನಾವರ, ಕುಮಟಾ, ಮುಂಡಗೋಡದಲ್ಲಿ ಹಿಂದೂಪರ ಸಂಘಟನೆಗಳು ಬಂದ್ ಗೆ ಕರೆ ನೀಡಿದ್ದವು. ಕುಮಟಾದಲ್ಲಿ ಹಿಂದೂಪರ ಸಂಘಟನೆಗಳ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿತು. ಐಜಿಪಿ ಅವರ ಕಾರಿಗೆ ಬೆಂಕಿ ಹಚ್ಚಲಾಯಿತು. ಪೊಲೀಸರ ಮೇಲೆ ಕಲ್ಲು ತೂರಾಟ ನಡೆಯಿತು. ಪೊಲೀಸರಿಗೆ ಗಾಯಗಳಾಗಿದ್ದವು, ವಾಹನಗಳು ಜಖಂಗೊಂಡಿದ್ದವು.
ಪರೇಶ್ ಮೇಸ್ತಾ ಅವರ ಸಾವಿನ ತನಿಖೆಯನ್ನು ಸಿಬಿಐಗೆ ವಹಿಸಲಾಗುವುದು ಎಂದು ಅಂದಿನ ಗೃಹ ಸಚಿವ ರಾಮಲಿಂಗಾ ರೆಡ್ಡಿ ಹೇಳಿದರು. ವಿರೋಧ ಪಕ್ಷಗಳ ಹೋರಾಟಕ್ಕೆ ಮಣಿದ ನಂತರ ಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿಲ್ಲ. ಪೋಷಕರ ಒತ್ತಾಯದ ಮೇರೆಗೆ ಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ ಎಂದು ಸಚಿವರು ಸ್ಪಷ್ಟಪಡಿಸಿದರು. ಈ ಪ್ರಕರಣದಲ್ಲಿ ಐವರನ್ನು ಬಂಧಿಸಲಾಗಿದೆ. ನಾಲ್ಕೂವರೆ ವರ್ಷಗಳ ಕಾಲ ತನಿಖೆ ನಡೆಸಿದ ನಂತರ ಸಿಬಿಐ ತನ್ನ ತನಿಖಾ ವರದಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಿದೆ.
5ನೇ ಬಾರಿಗೆ ಮದುವೆಯಾದ 11 ಮಕ್ಕಳಿರುವ ಪಾಕಿಸ್ತಾನಿ ವ್ಯಕ್ತಿ ಕಾರಣ ಏನು ಗೊತ್ತಾ?
.