ಮಂಗಳೂರು : ಹೊನ್ನಾವರದಲ್ಲಿ ಪರೇಶ್ ಮೇಸ್ತ ಸಾವಿಗೆ ಬಿಗ್ ಟ್ವಿಸ್ಟ್ ಸಿಕ್ಕಿದ್ದು, ಸಿಬಿಐ ವರದಿಯಲ್ಲಿ ಸ್ಪೋಟಕ ಮಾಹಿತಿ ಬಹಿರಂಗಪಡಿಸಿದೆ. ಈ ಬಗ್ಗೆ ಮಂಗಳೂರಿನಲ್ಲಿ ಕಾಂಗ್ರೆಸ್ ಶಾಸಕ ಯು.ಟಿ ಖಾದರ್ ಮಾತನಾಡಿ ʻಸಾವಿನ ಮನೆಯಲ್ಲಿ ಬಿಜೆಪಿಯವರು ರಾಜಕೀಯ ಮಾಡಿದ್ದಾರೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಮೆಸ್ತ ಹತ್ಯೆ ವೇಳೆ ʻಸಾವಿನ ಮನೆಯಲ್ಲಿ ಬಿಜೆಪಿಯವರು ರಾಜಕೀಯ ಮಾಡಿದ್ದಾರೆ. ಸಾವಿನ ಕುಟುಂಬಸ್ಥರು ಹೀಗೆ ಮಾಡೋದಕ್ಕೆ ಬಿಡಬಾರದು. ಮನೆಯಲ್ಲಿ ಪ್ರವಾಸಿ ಕೇಂದ್ರವನ್ನಾಗಿಸಿಕೊಂಡಿದ್ದರು. ಪರೇಶ್ ಮೇಸ್ತ ಹತ್ಯೆ ಪ್ರಕರಣವನ್ನು ಕೋಮುವಾದಕ್ಕೆ ಬಳಕೆ ಮಾಡಲಾಗಿದೆ. ರಾಜ್ಯ ಸರ್ಕಾರ ಸರಿಯಾಗಿ ಕೆಲಸ ಮಾಡುತ್ತಿಲ್ಲ. ಹಿಂದೂಗಳ ಹತ್ಯೆಯನ್ನೇ ರಾಜಕೀಯವಾಗಿ ಬಳಕೆ ಮಾಡಿಕೊಂಡಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಪ್ರಕರಣದ ಹಿನ್ನಲೆ:
2017ರ ಡಿಸೆಂಬರ್ 6ರಂದು ಹೊನ್ನಾವರದ ಮೀನುಗಾರ ಪರಮೇಶ್ ಮೇಸ್ತ ನಾಪತ್ತೆಯಾಗಿದ್ದ. ಇದಲ್ಲದೆ, ಡಿಸೆಂಬರ್ 8 ರಂದು ಹೊನ್ನಾವರ ನಗರದ ಶನಿ ದೇವಾಸ್ಥಾನದ ಹಿಂಭಾಗದ ಹಟ್ಟಿ ಕೆರೆಯಲ್ಲಿ ಶವ ಪತ್ತೆಯಾಗಿತ್ತು. ಇದು ಪಟ್ಟಣದಲ್ಲಿ ಉದ್ವಿಗ್ನ ವಾತಾವರಣವನ್ನು ಸೃಷ್ಟಿಸಿತು. 2017 ಡಿಸೆಂಬರ್ 11 ರಂದು ಮೇಸ್ತಾ ಅವರನ್ನು ಕೊಲ್ಲಲಾಯಿತು ಎಂಬ ಆರೋಪ ಕೇಳಿಬಂತು. ಕಾರವಾರ, ಹೊನ್ನಾವರ, ಕುಮಟಾ, ಮುಂಡಗೋಡದಲ್ಲಿ ಹಿಂದೂಪರ ಸಂಘಟನೆಗಳು ಬಂದ್ ಗೆ ಕರೆ ನೀಡಿದ್ದವು. ಕುಮಟಾದಲ್ಲಿ ಹಿಂದೂಪರ ಸಂಘಟನೆಗಳ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿತು. ಐಜಿಪಿ ಅವರ ಕಾರಿಗೆ ಬೆಂಕಿ ಹಚ್ಚಲಾಯಿತು. ಪೊಲೀಸರ ಮೇಲೆ ಕಲ್ಲು ತೂರಾಟ ನಡೆಯಿತು. ಪೊಲೀಸರಿಗೆ ಗಾಯಗಳಾಗಿದ್ದವು, ವಾಹನಗಳು ಜಖಂಗೊಂಡಿದ್ದವು.
ಪರೇಶ್ ಮೇಸ್ತಾ ಅವರ ಸಾವಿನ ತನಿಖೆಯನ್ನು ಸಿಬಿಐಗೆ ವಹಿಸಲಾಗುವುದು ಎಂದು ಅಂದಿನ ಗೃಹ ಸಚಿವ ರಾಮಲಿಂಗಾ ರೆಡ್ಡಿ ಹೇಳಿದರು. ವಿರೋಧ ಪಕ್ಷಗಳ ಹೋರಾಟಕ್ಕೆ ಮಣಿದ ನಂತರ ಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿಲ್ಲ. ಪೋಷಕರ ಒತ್ತಾಯದ ಮೇರೆಗೆ ಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ ಎಂದು ಸಚಿವರು ಸ್ಪಷ್ಟಪಡಿಸಿದರು. ಈ ಪ್ರಕರಣದಲ್ಲಿ ಐವರನ್ನು ಬಂಧಿಸಲಾಗಿದೆ. ನಾಲ್ಕೂವರೆ ವರ್ಷಗಳ ಕಾಲ ತನಿಖೆ ನಡೆಸಿದ ನಂತರ ಸಿಬಿಐ ತನ್ನ ತನಿಖಾ ವರದಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಿದೆ.