ನವದೆಹಲಿ : ಉಕ್ರೇನ್ ಅಧ್ಯಕ್ಷ ಝೆಲೆನ್ಸ್ಕಿಯೊಂದಿಗೆ ಪ್ರಧಾನಿ ಮೋದಿ ಮಾತುಕತೆ ನಡೆಸಿದ್ದು, ಸಂಘರ್ಷವನ್ನ ಕೊನೆಗೊಳಿಸುವ ಅಗತ್ಯವನ್ನ ಪುನರುಚ್ಚರಿಸಿದರು.
ಹೌದು, ಪ್ರಧಾನಿ ಮೋದಿ ಅವರು ಮಂಗಳವಾರ (ಅಕ್ಟೋಬರ್ 4) ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಅವರೊಂದಿಗೆ ದೂರವಾಣಿ ಸಂಭಾಷಣೆ ನಡೆಸಿದ್ದಾರೆ. ಉಕ್ರೇನ್ನಲ್ಲಿ ನಡೆಯುತ್ತಿರುವ ಸಂಘರ್ಷದ ಕುರಿತು ಉಭಯ ನಾಯಕರು ಚರ್ಚೆ ನಡೆಸಿದ್ದಾರೆ. ಸಂಘರ್ಷವನ್ನು ಶೀಘ್ರದಲ್ಲೇ ಕೊನೆಗೊಳಿಸಿ ಮಾತುಕತೆ ಮತ್ತು ರಾಜತಾಂತ್ರಿಕತೆಯ ಹಾದಿಯನ್ನು ಅನುಸರಿಸುವ ಅಗತ್ಯವನ್ನ ಪ್ರಧಾನಿ ಮೋದಿ ಪುನರುಚ್ಚರಿಸಿದ್ದಾರೆ.
PM Modi held a telephonic conversation today with Ukrainian President Volodymyr Zelenskyy, discussed the ongoing conflict in Ukraine.
PM Modi reiterated his call for early cessation of hostilities and the need to pursue the path of dialogue and diplomacy: PMO
(file pics) pic.twitter.com/VZY4hfJ3SU
— ANI (@ANI) October 4, 2022
ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಅವರೊಂದಿಗೆ ದೂರವಾಣಿ ಸಂಭಾಷಣೆ ನಡೆಸಿದ ಪ್ರಧಾನಿ ಮೋದಿ, ವಿಶ್ವಸಂಸ್ಥೆಯ ಚಾರ್ಟರ್, ಅಂತರರಾಷ್ಟ್ರೀಯ ಕಾನೂನು ಮತ್ತು ಎಲ್ಲಾ ರಾಜ್ಯಗಳ ಸಾರ್ವಭೌಮತ್ವ ಮತ್ತು ಪ್ರಾದೇಶಿಕ ಸಮಗ್ರತೆಯನ್ನು ಗೌರವಿಸುವ ಪ್ರಾಮುಖ್ಯತೆಯನ್ನು ಪುನರುಚ್ಚರಿಸಿದರು ಎಂದು ಪಿಎಂಒ ತಿಳಿಸಿದೆ.