ಶ್ರೀನಗರ: ಕಣಿವೆಯಲ್ಲಿ ಭಯೋತ್ಪಾದನೆ ಸಂಬಂಧಿತ ಹಿಂಸಾಚಾರದಲ್ಲಿ ಹುತಾತ್ಮರಾದ ನಾಲ್ವರು ಜಮ್ಮು ಮತ್ತು ಕಾಶ್ಮೀರ ಪೊಲೀಸ್ ಸಿಬ್ಬಂದಿಗಳ ಕುಟುಂಬಕ್ಕೆ ಕೇಂದ್ರ ಗೃಹ ಸಚಿವ ಅಮಿತ್ ಶಾ(Amit Shah) ಮಂಗಳವಾರ ನೇಮಕಾತಿ ಪತ್ರವನ್ನು ಹಸ್ತಾಂತರಿಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಕಾಶ್ಮೀರ ಕಣಿವೆಯಲ್ಲಿ ಭಯೋತ್ಪಾದಕರಿಂದ ಹತ್ಯೆಗೀಡಾದ ಪೊಲೀಸ್ ಸಿಬ್ಬಂದಿಯ ಸಂಬಂಧಿಕರೊಂದಿಗೆ ಭೇಟಿಯಾದ ಫೋಟೋಗಳನ್ನು ಅಮಿತ್ ಶಾ ಟ್ವಿಟರ್ನಲ್ಲಿ ಹಂಚಿಕೊಂಡಿದ್ದಾರೆ. ʻಭಯೋತ್ಪಾದಕರ ವಿರುದ್ಧದ ಹೋರಾಟದಲ್ಲಿ ಹುತಾತ್ಮರಾದ ಜಮ್ಮು ಮತ್ತು ಕಾಶ್ಮೀರ ಪೊಲೀಸ್ ಸಿಬ್ಬಂದಿಗಳ ಕುಟುಂಬಸ್ಥರನ್ನು ಭೇಟಿ ಮಾಡಿ, ಈ ನಾಲ್ವರು ಹುತಾತ್ಮರ ಕುಟುಂಬಕ್ಕೆ ನೇಮಕಾತಿ ಪತ್ರಗಳನ್ನು ಹಸ್ತಾಂತರಿಸಲಾಗಿದೆʼ ಎಂದು ಶಾ ಟ್ವೀಟ್ ಮಾಡಿದ್ದಾರೆ.
कश्मीर में आतंकवादियों से लड़ते हुए शहीद हुए @JmuKmrPolice के जवानों के परिजनों से भेंट कर उनका सम्मान किया।
साथ ही 4 शहीदों के परिजनों को नौकरी का नियुक्ति पत्र भी दिया।
आतंकवाद के खिलाफ भारत की लड़ाई की अगुआ रही जम्मू-कश्मीर पुलिस के त्याग व बलिदान को पूरा देश सलाम करता है। pic.twitter.com/80a05zJpO0
— Amit Shah (@AmitShah) October 4, 2022
ಭಯೋತ್ಪಾದನೆಯ ವಿರುದ್ಧ ಹೋರಾಡುವಲ್ಲಿ ಜಮ್ಮು ಮತ್ತು ಕಾಶ್ಮೀರ ಪೊಲೀಸರ ಪ್ರಯತ್ನಗಳನ್ನು ಅವರು ಶ್ಲಾಘಿಸಿದ್ದು, ಅವರ ತ್ಯಾಗಕ್ಕೆ ಇಡೀ ದೇಶವು ನಮನ ಸಲ್ಲಿಸುತ್ತದೆ ಎಂದು ಹೇಳಿದ್ದಾರೆ. ಇದರೊಂದಿಗೆ ಭಯೋತ್ಪಾದಕರಿಂದ ಹತ್ಯೆಗೀಡಾದ 24 ಜನರ ಕುಟುಂಬಗಳು ಗೃಹ ಸಚಿವರಿಂದ ನೇಮಕಾತಿ ಪತ್ರವನ್ನು ಸ್ವೀಕರಿಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಕಳೆದ ಮಾರ್ಚ್ 18 ರಂದು ಕಣಿವೆಯಲ್ಲಿ ಭಯೋತ್ಪಾದಕರ ವಿರುದ್ಧ ಹೋರಾಡಿ ಪ್ರಾಣ ತ್ಯಾಗ ಮಾಡಿದ ನಾಲ್ವರು ಜಮ್ಮು ಮತ್ತು ಕಾಶ್ಮೀರ ಪೊಲೀಸ್ ಸಿಬ್ಬಂದಿಯ ಕುಟುಂಬಕ್ಕೆ ಅಮಿತ್ ಶಾ ಜಮ್ಮುವಿನಲ್ಲಿ ನೇಮಕಾತಿ ಪತ್ರಗಳನ್ನು ಹಸ್ತಾಂತರಿಸಿದರು.
ಸಂವಿಧಾನದ 370 ನೇ ವಿಧಿಯನ್ನು ರದ್ದುಗೊಳಿಸಿದ ನಂತರ ಕಳೆದ ವರ್ಷ ಅಕ್ಟೋಬರ್ನಲ್ಲಿ ಜಮ್ಮು ಮತ್ತು ಕಾಶ್ಮೀರಕ್ಕೆ ಅವರ ಮೊದಲ ಬಾರಿಗೆ ಅಮಿತ್ ಶಾ ಭೇಟಿ ನೀಡಿದ್ದರು. ಈ ಸಂದರ್ಭದಲ್ಲಿ ನೌಗಾಮ್ನಲ್ಲಿ ಭಯೋತ್ಪಾದಕರ ಗುಂಡಿಗೆ ಬಲಿಯಾಗಿದ್ದ ಇನ್ಸ್ಪೆಕ್ಟರ್ ಪರ್ವೈಜ್ ಅಹ್ಮದ್ ಅವರ ಕುಟುಂಬ ಸದಸ್ಯರನ್ನು ಭೇಟಿಯಾಗಿ ಅಹ್ಮದ್ ಕುಟುಂಬಕ್ಕೆ ಸರ್ಕಾರಿ ಉದ್ಯೋಗದ ನೇಮಕಾತಿ ಪತ್ರವನ್ನು ಹಸ್ತಾಂತರಿಸಿದ್ದರು.
BIGG NEWS : ಪದವೀಧರ ಪ್ರಾಥಮಿಕ ಶಿಕ್ಷಕರ ನೇಮಕಾತಿ : ಅಭ್ಯರ್ಥಿಗಳ ಮೂಲದಾಖಲೆಗಳ ಪರಿಶೀಲನೆ ಬಗ್ಗೆ ಮುಖ್ಯ ಮಾಹಿತಿ
SHOCKING NEWS: ಉತ್ತರ ಪ್ರದೇಶದಲ್ಲಿ ಎಲ್ಇಡಿ ಟಿವಿ ಸ್ಫೋಟಗೊಂಡು ಬಾಲಕ ಸಾವು | LED TV Explode