ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್ನ ಡ್ರಾಚ್ ಪ್ರದೇಶದಲ್ಲಿ ಬುಧವಾರ ಬೆಳಿಗ್ಗೆ ಭದ್ರತಾ ಪಡೆಗಳೊಂದಿಗೆ ನಡೆದ ಎನ್ಕೌಂಟರ್ನಲ್ಲಿ ನಿಷೇಧಿತ ಭಯೋತ್ಪಾದಕ ಸಂಘಟನೆ ಜೈಶ್-ಎ-ಮೊಹಮ್ಮದ್ (ಜೆಎಂ) ಗೆ ಸೇರಿದ ಮೂವರು ಭಯೋತ್ಪಾದಕರನ್ನು ಕೊಲ್ಲಲಾಗಿದೆ ಎನ್ನಲಾಗಿದೆ. ಅಂದ ಹಗೇ ನಿನ್ನೆ ಸಂಜೆ ಎನ್ಕೌಂಟರ್ ನಡೆದಿತ್ತು.
ಪುಲ್ವಾಮಾದಲ್ಲಿ ಇತ್ತೀಚೆಗೆ ನಡೆದ ವಿಶೇಷ ಪೊಲೀಸ್ ಅಧಿಕಾರಿ ಜಾವೇದ್ ದಾರ್ ಮತ್ತು ವಲಸೆ ಕಾರ್ಮಿಕನ ಹತ್ಯೆಯಲ್ಲಿ ಭಾಗಿಯಾಗಿದ್ದ ಹನಾನ್ ಬಿನ್ ಯಾಕೂಬ್ ಮತ್ತು ಜಮ್ಶೆಡ್ ಎನ್ಕೌಂಟರ್ನಲ್ಲಿ ಹತರಾದ ಇಬ್ಬರು ಉಗ್ರರನ್ನು ಹನಾನ್ ಬಿನ್ ಯಾಕೂಬ್ ಮತ್ತು ಜಮ್ಷೆಡ್ ಎಂದು ಗುರುತಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.