ಮುಂಬೈ: ಮುಂಬೈನ ಬಾಂದ್ರಾ-ವರ್ಲಿ ಮಾರ್ಗದಲ್ಲಿ ವೇಗವಾಗಿ ಚಲಿಸುತ್ತಿದ್ದ ಕಾರೊಂದು ಅಪಘಾತ ಸಂಭವಿಸಿದ ಸ್ಥಳಕ್ಕೆ ಡಿಕ್ಕಿ ಹೊಡೆದ ಪರಿಣಾಮ ಐವರು ಮೃತಪಟ್ಟು, 12 ಮಂದಿ ಗಾಯಗೊಂಡಿದ್ದಾರೆ.
ಇಂದು ಮುಂಜಾನೆ 3.30 ರ ಸುಮಾರಿಗೆ ಈ ಅಪಘಾತ ಸಂಭವಿಸಿದ್ದು, ಆಂಬ್ಯುಲೆನ್ಸ್ ಮತ್ತು ಇತರ ವಾಹನಗಳನ್ನು ರಸ್ತೆಯ ಬದಿಯಲ್ಲಿ ನಿಲ್ಲಿಸಲಾಗಿತ್ತು, ಈ ಹಿಂದೆ ಸಂಭವಿಸಿದ ಅಪಘಾತದಲ್ಲಿ ಗಾಯಗೊಂಡವರನ್ನು ಆಸ್ಪತ್ರೆಗೆ ಕರೆದೊಯ್ಯಲು ಸಿದ್ಧತೆ ನಡೆಸಲಾಗಿತ್ತು ಎನ್ನಲಾಗಿದ್ದು, ಈ ವೇಳೆಯಲ್ಲಿ ಗಾಯಾಳುಗಳನ್ನು ಬಾಂದ್ರಾದಿಂದ ವರ್ಲಿ ಲೇನ್ಗೆ ಕರೆದೊಯ್ಯಲು ತಂಡವು ಸಿದ್ಧತೆ ನಡೆಸುತ್ತಿದ್ದಾಗ, ಹೈಸ್ಪೀಡ್ ಕಾರು ನಿಂತಿದ್ದ ವಾಹನಗಳಿಗೆ ಡಿಕ್ಕಿ ಹೊಡೆದ ಪರಿಣಾಮ ಐದು ಜನರು ಸಾವನ್ನಪ್ಪಿದ್ದಾರೆ.
ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಮೃತರ ಕುಟುಂಬಗಳಿಗೆ ಸಂತಾಪ ಸೂಚಿಸಿದ್ದಾರೆ. “ಮುಂಬೈನ ಬಾಂದ್ರಾ-ವರ್ಲಿ ಸೀ ಲಿಂಕ್ನಲ್ಲಿ ಸಂಭವಿಸಿದ ಅಪಘಾತದಿಂದ ಉಂಟಾದ ಜೀವಹಾನಿಯಿಂದ ನನಗೆ ನೋವಾಗಿದೆ. ದುಃಖತಪ್ತ ಕುಟುಂಬಗಳಿಗೆ ಸಂತಾಪಗಳು. ಗಾಯಗೊಂಡವರು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ನಾನು ಆಶಿಸುತ್ತೇನೆ” ಎಂದು ಪಿಎಂಒ ಕಚೇರಿ ಟ್ವೀಟ್ ಮಾಡಿದೆ.
Pained by the loss of lives due to an accident on the Bandra-Worli Sea Link in Mumbai. Condolences to the bereaved families. I hope that those who have been injured have a speedy recovery: PM @narendramodi
— PMO India (@PMOIndia) October 5, 2022