ನವದೆಹಲಿ: ವಿವಾಹಿತ ಮಗಳು ಅನುಕಂಪದ ನೇಮಕಾತಿಗಾಗಿ ತಾಯಿಯ ಮೇಲೆ ಅವಲಂಬಿತಳಾಗಿದ್ದಾಳೆ ಎಂದು ಹೇಳಲು ಸಾಧ್ಯವಿಲ್ಲ ಅಂತ ಸುಪ್ರೀಂ ಕೋರ್ಟ್ ಹೇಳಿದೆ.
ನ್ಯಾಯಮೂರ್ತಿಗಳಾದ ಎಂ.ಆರ್.ಶಾ ಮತ್ತು ಕೃಷ್ಣ ಮುರಾರಿ ಅವರನ್ನೊಳಗೊಂಡ ಪೀಠವು ಈ ಅಭಿಪ್ರಾಯ ವ್ಯಕ್ತಪಡಿಸಿದೆ. ಪ್ರತಿವಾದಿಯು ಮೃತ ಉದ್ಯೋಗಿಯ ಮೇಲೆ ಅಂದರೆ ಅವಳ ತಾಯಿಯ ಮೇಲೆ ಅವಲಂಬಿತನಾಗಿದ್ದಾನೆ ಎಂದು ಹೇಳಲಾಗುವುದಿಲ್ಲ ಅಂತ ಹೇಳಿದ್ದು, ಇದೇ ವೇಳೇ ಮೃತ ಉದ್ಯೋಗಿಯ ಸಾವಿನಿಂದ ಹಲವಾರು ವರ್ಷಗಳು ಕಳೆದಿವೆ ಎಂಬ ಅನುಕಂಪದ ಆಧಾರದ ಮೇಲೆ ಪ್ರತಿವಾದಿಯು ನೇಮಕಾತಿಗೆ ಅರ್ಹನಾಗಿರುವುದಿಲ್ಲ ಎಂದು ನ್ಯಾಯಾಲಯ ಹೇಳಿದೆ.
ಅನುಕಂಪದ ಆಧಾರದ ಮೇಲೆ ಉದ್ಯೋಗಕ್ಕಾಗಿ ಪ್ರತಿವಾದಿಯ ಅರ್ಜಿಯನ್ನು ಪರಿಗಣಿಸುವಂತೆ ಕಂಪನಿಗೆ ಸೂಚಿಸಿ ಮಹಾರಾಷ್ಟ್ರ ಆಡಳಿತಾತ್ಮಕ ನ್ಯಾಯಮಂಡಳಿ ಮತ್ತು ಬಾಂಬೆ ಹೈಕೋರ್ಟ್ನ ಎರಡು ಆದೇಶಗಳನ್ನು ಪ್ರಶ್ನಿಸಿ ಮೇಲ್ಮನವಿದಾರರು ಸಲ್ಲಿಸಿದ್ದ ಮೇಲ್ಮನವಿ ಅರ್ಜಿಯನ್ನು ಪರಿಗಣಿಸುವಾಗ ನ್ಯಾಯಾಲಯವು ಈ ಸ್ಪಷ್ಟೀಕರಣವನ್ನು ನೀಡಿದೆ.