ಮಂಡ್ಯ : ವಿವಿಧ ಬೇಡಿಕೆಗಳ ಆಗ್ರಹಿಸಿ ರೈತರು ಇಂದು ಮಂಡ್ಯದಲ್ಲಿ ಎತ್ತಿನಗಾಡಿ ಮೂಲಕ ರಸ್ತೆಯಲ್ಲಿ ಪ್ರತಿಭಟನೆ ನಡೆಸಿದ್ದಾರೆ. ಈ ವೇಳೆ ಪೊಲೀಸರು ರೈತರನ್ನು ವಶಕ್ಕೆ ಪಡೆದಿದ್ದಾರೆ.
ಮಂಡ್ಯದ ವಿ.ಸಿ.ಪಾರಂ ಗೇಟ್ ಬಳಿ ರೈತರು ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಎತ್ತಿನಗಾಡಿ ಮೂಲಕ ಬಂದು ಪ್ರತಿಭಟನೆ ನಡೆಸಿದ್ದಾರೆ. ಈ ವೇಳೆ ಪೊಲೀಸರು ಮತ್ತು ರೈತರ ನಡುವೆ ವಾಗ್ವಾದ ನಡೆದಿದೆ. ಹೆದ್ದಾರಿಯಲ್ಲಿ ಎತ್ತಿನ ಗಾಡಿ ನಿಲ್ಲಿಸದಂತೆ ಪೊಲೀಸರು ಎಚ್ಚರಿಕೆ ನೀಡಿದ್ದಾರೆ.
ಪೊಲೀಸರ ಎಚ್ಚರಿಕೆ ನೀಡಿದರೂ ರೈತರು ಹೆದ್ದಾರಿಯಲ್ಲಿ ಪ್ರತಿಭಟನೆ ನಡೆಸಿದ್ದರು. ಈ ವೇಳೆ ಪ್ರತಿಭಟನಾನಿರತ ರೈತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.