ಗುರುಗ್ರಾಮ : ಸಮಾಜವಾದಿ ಪಕ್ಷದ ಮುಖ್ಯಸ್ಥ ಮುಲಾಯಂ ಸಿಂಗ್ ಯಾದವ್ ಅವರ ಆರೋಗ್ಯ ಸ್ಥಿತಿ ಇನ್ನೂ ಚಿಂತಾಜನಕವಾಗಿದೆ. ಅವರನ್ನು ಮಂಗಳವಾರ ತೀವ್ರ ನಿಗಾ ಘಟಕಕ್ಕೆ (ಐಸಿಯು) ಸ್ಥಳಾಂತರಿಸಲಾಗಿದೆ ಎಂದು ಆಸ್ಪತ್ರೆ ತಿಳಿಸಿದೆ. 82 ವರ್ಷದ ಯಾದವ್ ಅವರು ಸೋಮವಾರದವರೆಗೆ ಆಸ್ಪತ್ರೆಯ ಕ್ರಿಟಿಕಲ್ ಕೇರ್ ಯುನಿಟ್ನಲ್ಲಿದ್ದರು.
ಮುಲಾಯಂ ಸಿಂಗ್ ಯಾದವ್ ಅವರನ್ನು ಆಗಸ್ಟ್ 22 ರಂದು ಮೇದಾಂತ ಆಸ್ಪತ್ರೆಗೆ ದಾಖಲಿಸಲಾಗಿತ್ತು. ನಂತರ ವೈದ್ಯರ ತಜ್ಞರ ತಂಡವು ಅವರ ಚಿಕಿತ್ಸೆಯಲ್ಲಿ ಹಗಲಿರುಳು ನಿರತವಾಗಿದೆ. ಮೂಲಗಳ ಪ್ರಕಾರ, ಮುಲಾಯಂಸಿಂಗ್ ಯಾದವ್ ಅವರನ್ನು ಜುಲೈನಲ್ಲಿ ಕೆಲವು ದಿನಗಳ ಕಾಲ ಆಸ್ಪತ್ರೆಗೆ ದಾಖಲಿಸಬೇಕಾಯಿತು.
ಮುಲಾಯಂ ಸಿಂಗ್ ಯಾದವ್ ಅವರ ಆರೋಗ್ಯ ವಿಚಾರಿಸಲು ಸ್ವತಃ ಪ್ರಧಾನಿ ನರೇಂದ್ರ ಮೋದಿ ಅವರು ಅಖಿಲೇಶ್ ಯಾದವ್ ಅವರೊಂದಿಗೆ ದೂರವಾಣಿಯಲ್ಲಿ ಮಾತನಾಡಿದ್ದಾರೆ ಮತ್ತು ಯಾವುದೇ ಸಹಾಯದ ಭರವಸೆ ನೀಡಿದ್ದಾರೆ. ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಕೂಡ ಅಖಿಲೇಶ್ ಯಾದವ್ ಅವರಿಗೆ ಕರೆ ಮಾಡಿ ಮುಲಾಯಂ ಸಿಂಗ್ ಅವರ ಸ್ಥಿತಿಯ ಬಗ್ಗೆ ವಿಚಾರಿಸಿದ್ದಾರೆ.